ಪುತ್ತೂರು: ಸೆ.3 ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪ್ಯ ಎಂಬಲ್ಲಿ ನಡೆದ ಅರ್ಯಾಪು ಮೇರ್ಲ ನಿವಾಸಿ ,ಪುತ್ತೂರು ಹಿಂದೂ ಜಾಗರಣ ವೇದಿಕೆ ಪುತ್ತೂರು ತಾಲೂಕು ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಅವರ ಕೊಲೆ ನಡೆದಿದ್ದು ಸಂಬಂಧಿಸಿದಂತೆ ಪೋಲೀಸರು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂಪ್ಯ ಠಾಣೆಯ ಮುಂಭಾಗದಲ್ಲಿ ಗಣೇಶೋತ್ಸವ ಪೆಂಡಲ್ ಎದುರಲ್ಲೇ ಮಧ್ಯಾರಾತ್ರಿ ಯಕ್ಷಗಾನ ನಡೆಯುತಿದ್ದು ಸಾರ್ವಜನಿಕರ ಎದುರೇ ಕಾರ್ತಿಕ್ ಗೆ ಚೂರಿ ಇರಿದು ಕೊಲೆ ಮಾಡಲಾಗಿತ್ತು.
ಕೊಲೆ ನಡೆಸಿದ ಪ್ರಮುಖ ಆರೋಪಿ,ಉಳ್ಳಾಲ ಠಾಣೆಯಲ್ಲಿ ರೌಡಿ ಶೀಟರ್ ಮಂಗಳೂರು ಉಳ್ಳಾಲಬೈಲು ನಿವಾಸಿ ಪ್ರೀತೇಶ್ (28 ವರ್ಷ), ಪುತ್ತೂರು ಆರ್ಯಾಪು ಗ್ರಾಮದ ಚರಣ್ (26 ವರ್ಷ), ಈತನ ಸಹೋದರ ಕಿರಣ್ (36 ವರ್ಷ) ಎಂಬವರುಗಳನ್ನು ಇಂದು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಾರ್ತಿಕ್ ಸುವರ್ಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಅಶ್ರಯ ನೀಡಿದ ಮೇರೆಗೆ ಮಂಗಳೂರು ಅತ್ತಾವರ ನಿವಾಸಿ ಸ್ಡೀವನ್ ಮೊಂತೆರೋ ಎಂಬಾತನನ್ನು ಪೊಲೀಸರು ಬಂಧಿಸಿರುತ್ತಾರೆ..
ಕೊಲೆಯ ಬಗ್ಗೆ ತನಿಖೆ ಪ್ರಗತಿಯಲ್ಲಿದೆ ಎಂದು ಪೋಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕೊಲೆ ಯಾವಾ ಉದ್ದೇಶಕ್ಕೆ ನಡೆದಿದೆ ಎನ್ನುವ ಬಗ್ಗೆ ಪೋಲೀಸರು ಇನ್ನಷ್ಟೇ ಮಾಹಿತಿ ನೀಡಬೇಕಾಗಿದೆ.
ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗಣೇಶೊತ್ಸವ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಸ್ಥಳೀಯರಾದ ಚರಣ್ ರಾಜ್, ಕಿರಣ್ ಮತ್ತು ಪ್ರೀತೇಶ್ ಎಂಬವರು ಚೂರಿಯಿಂದ ಇರಿದು ಕಾರ್ತಿಕ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆಗೈಯ್ದಿದ್ದಾರೆ. ಬಳಿಕ, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…