ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.
ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆಬ್ರವರಿ 25ರಂದು ನಡೆಯಲಿದೆ. ಸದ್ರಿ ಪ್ರಕರಣದಲ್ಲಿ ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು, ತಪ್ಪಿದಲ್ಲಿ ಸದ್ರಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…