Featured

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ

ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ದಾಳಿ ನಡೆಸಿ ವಶಕ್ಕೆ ಪಡೆದಿರುವ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು, ಈ ಅಕ್ರಮ ಸಾಗಾಟಕ್ಕೆ ಜಾನುವಾರುಗಳನ್ನು ಮಾರಾಟ ಮಾಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಆರ್ಯಾಪು ನಿವಾಸಿ ಶಿವಪ್ರಸಾದ್ (52) ಬಂಧಿತ ಆರೋಪಿ.

ದಿನಾಂಕ 05.10.2026 ರಂದು ಬೆಳಗಿನ ಜಾವ ಪಿಕಪ್ ವಾಹನದಲ್ಲಿ ಜಾನುವಾರುಗಳನ್ನು ಕೇರಳದ ಕಡೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅವರು ಸಿಬ್ಬಂದಿಯೊಂದಿಗೆ ಪುತ್ತೂರು ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಎಂಬಲ್ಲಿ ನಾಕಾಬಂಧಿ ನಡೆಸಿ, ಪಿಕಪ್ ವಾಹನವನ್ನು ತಡೆದಿದ್ದಾರೆ.

ಈ ವೇಳೆ ಪೊಲೀಸರನ್ನು ಕಂಡು ವಾಹನದ ಚಾಲಕ ಹಾಗೂ ಅದರಲ್ಲಿದ್ದ ಮತ್ತೋರ್ವ ವ್ಯಕ್ತಿ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ವಾಹನ ಪರಿಶೀಲಿಸಿದಾಗ, ಯಾವುದೇ ಪರವಾನಿಗೆಯಿಲ್ಲದೆ ಮಾಂಸಕ್ಕಾಗಿ ಕೇರಳಕ್ಕೆ ಸಾಗಿಸುವ ಉದ್ದೇಶದಿಂದ 11 ಜಾನುವಾರುಗಳನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ತುಂಬಿರುವುದು ಕಂಡುಬಂದಿದೆ.

ಪೊಲೀಸರು ಜಾನುವಾರುಗಳು ಹಾಗೂ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಸೂಕ್ತ ದಾಖಲೆಗಳಿಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ್ದ ಆರೋಪಿ ಶಿವಪ್ರಸಾದ್‌ನನ್ನು ಬಂಧನ ಮಾಡಿದ್ದಾರೆ.

ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಹಾಗೂ ಪ್ರಾಣಿ ದಯಾ ಸಂಘಟನೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Vishwa News 24

Recent Posts

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

2 minutes ago

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

34 minutes ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

39 minutes ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

14 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

22 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

22 hours ago