ಪುತ್ತೂರು: ಹೊತ್ತು, ಹೆತ್ತು ಸಾಕಿ ಸಲಹಿದ ತಾಯಿಯನ್ನೇ ಮಗ ಅತ್ಯಾಚಾರಗೈದು ಅಮಾನುಷವಾಗಿ ವರ್ತಿಸಿದ ಘಟನೆ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ ಆರೋಪಿ ಕೆದಂಬಾಡಿ ಕುರಿಕ್ಕಾರದ ಜಯರಾಮ ರೈ ಎನ್ನಲಾಗಿದೆ.
58 ವರ್ಷ ಪ್ರಾಯದ ತನ್ನ ತಾಯಿಯೊಂದಿಗೆ ವಾಸವಾಗಿರುವ ಜಯರಾಮ ಜ.12ರಂದು ಎಂದಿನಂತೆ ರಾತ್ರಿ ಊಟ ಮಾಡಿ ಅವರ ರೂಮ್ ನಲ್ಲಿ ಮಲಗಿದ್ದ. ಮುಂಜಾನೆ 3 ಗಂಟೆಯ ವೇಳೆಗೆ ತಾಯಿ ಮಲಗಿದ್ದ ರೂಮ್ ಗೆ ಹೋಗಿ ಜಯರಾಮ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಈ ಸಂದರ್ಭದಲ್ಲಿ ತಾಯಿ ಆತನನ್ನು ತಳ್ಳಿ ಬೊಬ್ಬೆ ಹಾಕಿದಾಗ ಆತ ತಾಯಿಯ ಬಾಯಿಯನ್ನು, ಬಟ್ಟೆಯಿಂದ ಒತ್ತಿ ಹಿಡಿದು ಬೊಬ್ಬೆ ಹಾಕದಂತೆ ಬೆದರಿಕೆ ಹಾಕಿ ತಾಯಿ ಪ್ರತಿಭಟಿಸಿದರೂ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಈ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಂದು ಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಜ.13ರಂದು ಬೆಳಿಗ್ಗೆ 07.45ಕ್ಕೆ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಜಯರಾಮ ಬಲವಂತದಿಂದ ಅವರನ್ನು ಮನೆಯ ಹಾಲ್‌ಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಕೇಸು ದಾಖಲಿಸಲಾಗಿದೆ.
ಮಗನ ಕೃತ್ಯದಿಂದ ಅಸ್ವಸ್ಥಗೊಂಡಿರುವ ಮಹಿಳೆ ಮಧ್ಯಾಹ್ನ 1 ಗಂಟೆಗೆ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಬಂದಾಗ ವೈದ್ಯರು ಪರೀಕ್ಷಿಸಿ, ಒಳರೋಗಿಯಾಗಿ ದಾಖಲಿಸಿಕೊಂಡಿದ್ದಾರೆ. ಬಲವಂತವಾಗಿ ಅತ್ಯಾಚಾರ ನಡೆಸಿ,ಜೀವ ಬೆದರಿಕೆ ಒಡ್ಡಿದ ಮಗ ಜಯರಾಮನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿಕೊಂಡಿರುವ ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376(2)(n)506 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…