ಪುತ್ತೂರು : ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ‍್ಯಕರ್ತೆ ಭವ್ಯ (28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ.
ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದ್ದು, ಇದನ್ನು ತಡೆಗಟ್ಟುವ ಚಿಕಿತ್ಸೆಯಿಂದ ಪ್ರಯೋಜನವಾಗದ ಕಾರಣ ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿದ್ದು, ಅಲ್ಲಿಯೂ ಚಿಕಿತ್ಸೆ ಫಲಕಾರಿ ಆಗದೆ ಜೂ. 21ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತಿ ಬಾಲಕೃಷ್ಣ ಗೌಡ, 4ನೇ ತರಗತಿ ಕಲಿಯುತ್ತಿರುವ ಪುತ್ರ ಭವಿಷ್, 3ನೇ ತರಗತಿಯ ಸ್ವಸ್ತಿಕ್ ಮತ್ತು ಹಸುಗೂಸು ಗಂಡು ಮಗುವನ್ನು ಅಗಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…