ಪುತ್ತೂರು: ಹೊಳೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ.
ಮುಕ್ರಂಪಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಬಳಿಯ ಮಹೀಂದ್ರ ಶೋರೂಂ ನ ಉದ್ಯೋಗಿ ಸನ್ಮಿತ್ (21) ಹೊಳೆಗೆ ಹಾರಿದ ಯುವಕನಾಗಿದ್ದಾನೆ. ಈತನ ಸ್ಕೂಟರ್ ಹೊಳೆಯ ಬದಿಯಿಂದ 150ಮೀ ದೂರದಲ್ಲಿ ನಿಲ್ಲಿಸಿದ್ದು ಅದರಲ್ಲಿ ಮೊಬೈಲ್ ಫೋನ್, ಪರ್ಸ್, ಹೆಲ್ಮೆಟ್, ಟಿಫಿನ್ ಬಾಕ್ಸ್ ಸಹಿತ ಪತ್ತೆಯಾಗಿದೆ.
ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರ ಗೌಡ ಎಂಬವರ ಪುತ್ರನಾಗಿರುವ ಸನ್ಮಿತ್ ಮಹೇಂದ್ರ ಶೋರೂಂ ನಲ್ಲಿ ಉದ್ಯೋಗಿಯಾಗಿದ್ದು ನಿನ್ನೆಯೂ ಕೆಲಸಕ್ಕೆ ಹಾಜರಾಗಿದ್ದ. ಪ್ರತಿದಿನ ಸಂಜೆ 6.30ರ ವೇಳೆಗೆ ಮನೆ ಸೇರುತ್ತಿದ್ದ ಸನ್ಮಿತ್ ನಿನ್ನೆಯ ದಿನ ತಂದೆಗೆ ಕರೆಮಾಡಿ ಮನೆ ತಲುಪುವಾಗ ರಾತ್ರಿ 10 ಗಂಟೆಯಾಗಬಹುದೆಂದು ತಿಳಿಸಿದ್ದ. ರಾತ್ರಿ 9.30ರ ವರೆಗೂ ಮಗ ಮನೆಗೆ ಬಾರದಿದ್ದಾಗ ತಂದೆ ಖುದ್ದಾಗಿ ಸನ್ಮಿತ್ ಗೆ ಕರೆಮಾಡಿ ವಿಚಾರಿಸಿದ್ದು ಇನ್ನರ್ಧ ಗಂಟೆಯಲ್ಲಿ ಮನೆ ಬರುವುದಾಗಿ ಹೇಳಿದ್ದ. ರಾತ್ರಿ 11 ಗಂಟೆಯಾದರೂ ಮಗ ಮನೆಗೆ ಬಾರದಿದ್ದಾಗ ತಂದೆ ಮತ್ತೆ ಸನ್ಮಿತ್ ಮೊಬೈಲ್ ಗೆ ಕರೆ ಮಾಡಿದ್ದು, ಕರೆ ಸ್ವೀಕರಿಸುತ್ತಿರಲಿಲ್ಲ.
ರಾತ್ರಿ 1 ರವರೆಗೂ ಮಗ ಬಾರದಿದ್ದಾಗ ಪರಿಚಯದವರೊಂದಿಗೆ ಕಾರಿನಲ್ಲಿ ಮಗನನ್ನು ಹುಡುಕುತ್ತಾ ಬಂದಿದ್ದಾರೆ. ಈ ವೇಳೆ ಸರ್ವೆ ಹೊಳೆ ಬಳಿ ಮಗನ ಸ್ಕೂಟರ್ ಕಂಡು ಸಂಶಯಗೊಂಡ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಸ್ಕೂಟರ್ ಮತ್ತು ಅದರಲ್ಲಿದ್ದ ವಸ್ತುಗಳು ಸನ್ಮಿತ್ ಗೆ ಸೇರಿದ್ದೆಂದು ಖಚಿತವಾಗಿದೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು ಹೊಳೆಯಲ್ಲಿ ಸನ್ಮಿತ್ ಮೃತದೇಹಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ. ಸನ್ಮಿತ್ ನಿಜವಾಗಿಯೂ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎನ್ನುವ ಪ್ರಶ್ನೆಗೆ ಪೊಲೀಸ್ ತನಿಖೆಯ ಬಳಿಕ ಉತ್ತರ ಸಿಗಬೇಕಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…