Featured

ಪುತ್ತೂರು: ಹೊಳೆಯ ಬದಿ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ – vishwanews24

ಪುತ್ತೂರು: ಹೊಳೆಯ ಬದಿ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ

ಪುತ್ತೂರು: ಹೊಳೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ.

ಮುಕ್ರಂಪಾಡಿಯ ಇಂಡಸ್ಟ್ರಿಯಲ್‌ ಎಸ್ಟೇಟ್‌ ಬಳಿಯ ಮಹೀಂದ್ರ ಶೋರೂಂ ನ ಉದ್ಯೋಗಿ ಸನ್ಮಿತ್‌ (21) ಹೊಳೆಗೆ ಹಾರಿದ ಯುವಕನಾಗಿದ್ದಾನೆ. ಈತನ ಸ್ಕೂಟರ್ ಹೊಳೆಯ ಬದಿಯಿಂದ 150ಮೀ ದೂರದಲ್ಲಿ ನಿಲ್ಲಿಸಿದ್ದು ಅದರಲ್ಲಿ ಮೊಬೈಲ್‌ ಫೋನ್‌, ಪರ್ಸ್‌, ಹೆಲ್ಮೆಟ್‌, ಟಿಫಿನ್‌ ಬಾಕ್ಸ್‌ ಸಹಿತ ಪತ್ತೆಯಾಗಿದೆ.

ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರ ಗೌಡ ಎಂಬವರ ಪುತ್ರನಾಗಿರುವ ಸನ್ಮಿತ್ ಮಹೇಂದ್ರ ಶೋರೂಂ ನಲ್ಲಿ ಉದ್ಯೋಗಿಯಾಗಿದ್ದು ನಿನ್ನೆಯೂ ಕೆಲಸಕ್ಕೆ ಹಾಜರಾಗಿದ್ದ. ಪ್ರತಿದಿನ ಸಂಜೆ 6.30ರ ವೇಳೆಗೆ ಮನೆ ಸೇರುತ್ತಿದ್ದ ಸನ್ಮಿತ್‌ ನಿನ್ನೆಯ ದಿನ ತಂದೆಗೆ ಕರೆಮಾಡಿ ಮನೆ ತಲುಪುವಾಗ ರಾತ್ರಿ 10 ಗಂಟೆಯಾಗಬಹುದೆಂದು ತಿಳಿಸಿದ್ದ. ರಾತ್ರಿ 9.30ರ ವರೆಗೂ ಮಗ ಮನೆಗೆ ಬಾರದಿದ್ದಾಗ ತಂದೆ ಖುದ್ದಾಗಿ ಸನ್ಮಿತ್‌ ಗೆ ಕರೆಮಾಡಿ ವಿಚಾರಿಸಿದ್ದು ಇನ್ನರ್ಧ ಗಂಟೆಯಲ್ಲಿ ಮನೆ ಬರುವುದಾಗಿ ಹೇಳಿದ್ದ. ರಾತ್ರಿ 11 ಗಂಟೆಯಾದರೂ ಮಗ ಮನೆಗೆ ಬಾರದಿದ್ದಾಗ ತಂದೆ ಮತ್ತೆ ಸನ್ಮಿತ್‌ ಮೊಬೈಲ್‌ ಗೆ ಕರೆ ಮಾಡಿದ್ದು, ಕರೆ ಸ್ವೀಕರಿಸುತ್ತಿರಲಿಲ್ಲ.

ರಾತ್ರಿ 1 ರವರೆಗೂ ಮಗ ಬಾರದಿದ್ದಾಗ ಪರಿಚಯದವರೊಂದಿಗೆ ಕಾರಿನಲ್ಲಿ ಮಗನನ್ನು ಹುಡುಕುತ್ತಾ ಬಂದಿದ್ದಾರೆ. ಈ ವೇಳೆ ಸರ್ವೆ ಹೊಳೆ ಬಳಿ ಮಗನ ಸ್ಕೂಟರ್‌ ಕಂಡು ಸಂಶಯಗೊಂಡ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಸ್ಕೂಟರ್‌ ಮತ್ತು ಅದರಲ್ಲಿದ್ದ ವಸ್ತುಗಳು ಸನ್ಮಿತ್‌ ಗೆ ಸೇರಿದ್ದೆಂದು ಖಚಿತವಾಗಿದೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು ಹೊಳೆಯಲ್ಲಿ ಸನ್ಮಿತ್‌ ಮೃತದೇಹಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ. ಸನ್ಮಿತ್‌ ನಿಜವಾಗಿಯೂ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎನ್ನುವ ಪ್ರಶ್ನೆಗೆ ಪೊಲೀಸ್‌ ತನಿಖೆಯ ಬಳಿಕ ಉತ್ತರ ಸಿಗಬೇಕಾಗಿದೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

8 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

8 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

8 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

8 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

9 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

9 hours ago