Featured

ಪುತ್ತೂರು: 106 ಕಿಲೋ ಗಾಂಜಾ ವಶ ; ಇಬ್ಬರು ಆರೋಪಿಗಳ ಬಂಧನ – vishwanews24

ಪುತ್ತೂರು: 106 ಕಿಲೋ ಗಾಂಜಾ ವಶ ; ಇಬ್ಬರು ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ 106 ಕಿಲೋ 60 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದಿನಾಂಕ 19-01-2026ರಂದು ಸಂಜೆ, ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಗುಣಪಾಲ ಜೆ. ಅವರ ನೇತೃತ್ವದಲ್ಲಿ ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ತಪಾಸಣೆ ನಡೆಸಲಾಯಿತು.

ಕಾರಿನ ಚಾಲಕ ರಫೀಕ್ ಪಿ. (37), ಹಾಗೂ ಗೂಡ್ಸ್ ವಾಹನದ ಚಾಲಕ ಅಬ್ದುಲ್ ಸಾದಿಕ್ (37), ಇಬ್ಬರೂ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾಗಿದ್ದು, ವಾಹನಗಳ ಪರಿಶೀಲನೆಯ ವೇಳೆ ಒಟ್ಟು 73 ಕಟ್ಟುಗಳಲ್ಲಿ 106.60 ಕಿಲೋ ಗಾಂಜಾ ಪತ್ತೆಯಾಗಿದೆ. ಗಾಂಜಾದ ಅಂದಾಜು ಮೌಲ್ಯ ರೂ.53.03 ಲಕ್ಷ ಎಂದು ಅಂದಾಜಿಸಲಾಗಿದೆ.

ಆರೋಪಿಗಳು ಗಾಂಜಾವನ್ನು ಕೇರಳ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ಗಾಂಜಾ, ಬಳಸಿದ ವಾಹನಗಳು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ.09/2026 ಕಲಂ 8(c), 20(b)(ii)C NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

18 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

18 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

18 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

21 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

21 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago