ಪುತ್ತೂರು: ತಾಲೂಕಿನ ದಾರಂದಕುಕ್ಕು ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.2ರ ಗುರುವಾರ ನಡೆದಿದೆ.
ದಾರಂದಕುಕ್ಕು ನಿವಾಸಿಯಾದ ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ಎಂಬವರ ಪತ್ನಿ ಆಶಿಕಾ(20) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಪತಿ, 7 ತಿಂಗಳ ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಇವರಿಗೆ ಎರಡು ವರ್ಷದ ಹಿಂದೆ ವಿವಾಹವಾಗಿದ್ದು, ಆಶಿಕಾ ಚಿಕ್ಕ ವಯಸ್ಸಿನಿಂದಲೇ ಅನಾರೋಗ್ಯದಿಂದ ಬಳಲುತ್ತಿದ್ದರು. ವಿವಾಹದ ಬಳಿಕವೂ ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…