Featured

ಪುತ್ತೂರು: 6 ವರ್ಷಗಳ ಹಿಂದೆ ನಡೆದ ಪೋಕ್ಸೋ ಪ್ರಕರಣ : ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ, ದಂಡ – Vishwanewss24

ಪುತ್ತೂರು: 6 ವರ್ಷಗಳ ಹಿಂದೆ ನಡೆದ ಪೋಕ್ಸೋ ಪ್ರಕರಣ : ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ, ದಂಡ – Vishwanewss24

ಪುತ್ತೂರು : ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದಲ್ಲಿ 6 ವರ್ಷಗಳ ಹಿಂದೆ ನಡೆದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಅರೋಪಿಯನ್ನು ಅಪರಾಧಿ ಎಂದು ಪರಿಗಣಿಸಿದ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜಾಲ್ಸೂರು ಗ್ರಾಮದ ಸತೀಶ್ ಶಿಕ್ಷೆಗೆ ಒಳಗಾದಾತ.

2015ರ ಡಿ.20ರಂದು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಚಾಕಲೇಟ್ ಮತ್ತು ಐಸ್‍ಕ್ರೀಂ ಕೊಡುವುದಾಗಿ ಹೇಳಿ ಮನೆಯೊಳಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿತ್ತುಬಾಲಕಿಯ ತಾಯಿ ನೀಡಿದ ದೂರಿನಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ರುಡಾಲ್ಫ್ ಪಿರೇರಾ ಅವರು ಪ್ರಕರಣಕ್ಕೆ ಸಂಬಂಧಿಸಿ 16 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದರು. ಬಳಿಕ ಆರೋಪಿಯನ್ನು ಅಪರಾಧಿ ಎಂದು ಪರಿಗಣಿಸಿ ಆತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಹಾಗೂ 25 ಸಾವಿರ ರೂ. ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ಮತ್ತೆ 1 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ 20 ಸಾವಿರ ರೂ. ನೊಂದ ಬಾಲಕಿಗೆ ಪರಿಹಾರವಾಗಿ ನೀಡಬೇಕು ಹಾಗೂ ದ.ಕ.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 1ಲಕ್ಷ ರೂ. ನೊಂದ ಬಾಲಕಿಗೆ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರ ಪೋಕ್ಸೋ ವಿಶೇಷ ಸರ್ಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದಿಸಿದ್ದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…

3 hours ago

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

9 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

10 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

10 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

11 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

11 hours ago