ಪುತ್ತೂರು : ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದಲ್ಲಿ 6 ವರ್ಷಗಳ ಹಿಂದೆ ನಡೆದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಅರೋಪಿಯನ್ನು ಅಪರಾಧಿ ಎಂದು ಪರಿಗಣಿಸಿದ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜಾಲ್ಸೂರು ಗ್ರಾಮದ ಸತೀಶ್ ಶಿಕ್ಷೆಗೆ ಒಳಗಾದಾತ.
2015ರ ಡಿ.20ರಂದು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಚಾಕಲೇಟ್ ಮತ್ತು ಐಸ್‍ಕ್ರೀಂ ಕೊಡುವುದಾಗಿ ಹೇಳಿ ಮನೆಯೊಳಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿತ್ತುಬಾಲಕಿಯ ತಾಯಿ ನೀಡಿದ ದೂರಿನಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ರುಡಾಲ್ಫ್ ಪಿರೇರಾ ಅವರು ಪ್ರಕರಣಕ್ಕೆ ಸಂಬಂಧಿಸಿ 16 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದರು. ಬಳಿಕ ಆರೋಪಿಯನ್ನು ಅಪರಾಧಿ ಎಂದು ಪರಿಗಣಿಸಿ ಆತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಹಾಗೂ 25 ಸಾವಿರ ರೂ. ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ಮತ್ತೆ 1 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ 20 ಸಾವಿರ ರೂ. ನೊಂದ ಬಾಲಕಿಗೆ ಪರಿಹಾರವಾಗಿ ನೀಡಬೇಕು ಹಾಗೂ ದ.ಕ.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 1ಲಕ್ಷ ರೂ. ನೊಂದ ಬಾಲಕಿಗೆ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರ ಪೋಕ್ಸೋ ವಿಶೇಷ ಸರ್ಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದಿಸಿದ್ದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…