ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ ಹೆಸರು ಹೆಸರನ್ನಿಡುವ ಪ್ರಸ್ತಾಪಕ್ಕೆ ರಾಜ್ಯ ಸರಕಾರ ಅನುಮೋದನೆ ನೀಡಿದೆ.
ಶಾಸಕ ಸಂಜೀವ ಮಠಂದೂರು ಅವರ ಮುತುವರ್ಜಿಯಲ್ಲಿ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ಸರಕಾರದ ಮೇಲೆ ಒತ್ತಡ ಹಾಕಲಾಗಿತ್ತು. ಪುತ್ತೂರು ನಗರಸಭೆಯ ಸಾಮಾನ್ಯ ಸಭೆಯಲ್ಲಿ ಕೋಟಿ ಚೆನ್ನಯ ಬಸ್ ನಿಲ್ದಾಣ ಎಂದು ಹೆಸರಿಡುವ ಸಂಬಂಧ ನಿರ್ಣಯ ಅಂಗೀಕರಿಸಿ ಸರಕಾರಕ್ಕೆ ಕಳುಹಿಸಲಾಗಿತ್ತು. ಈ ನಿರ್ಣಯದ ಪ್ರತಿಯನ್ನಿಟ್ಟುಕೊಂಡು ಶಾಸಕ ಸಂಜೀವ ಮಠಂದೂರು ತಮ್ಮ ಟಿಪ್ಪಣಿಯನ್ನೂ ಬರೆದು ಕೆಎಸ್ಸಾರ್ಟಿಸಿಗೆ ಸಲ್ಲಿಸಿದ್ದರು. ಕೆಎಸ್ಸಾರ್ಟಿಸಿ ಅಧ್ಯಕ್ಷರ ಜತೆ ಖುದ್ದು ಮಾತನಾಡಿದ್ದ ಶಾಸಕರು ಆವಶ್ಯತೆಯನ್ನು ಮನಗಾಣಿಸಿದ್ದರು. ಇದಾದ ಬಳಿಕ ಕೆಎಸ್ಸಾರ್ಟಿಸಿ ನಿರ್ದೇಶಕ ಮಂಡಳಿಯ ಸಭೆಯಲ್ಲಿ ಇದನ್ನು ಅಂಗೀಕರಿಸಿ ಸರಕಾರಕ್ಕೆ ಸಲ್ಲಿಸಲಾಗಿತ್ತು. ಇದೀಗ ಸರಕಾರದ ಅಧೀನ ಕಾರ್ಯದರ್ಶಿ(ಸಾರಿಗೆ ಇಲಾಖೆ) ಪುಷ್ಪ ವಿ. ಎಸ್. ಸುತ್ತೊಲೆ ಹೊರಡಿಸಿದ್ದಾರೆ.
ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯ್ಯ ಅವರ ಹೆಸರನ್ನು ಬಸ್ ನಿಲ್ದಾಣಕ್ಕೆ ಇಟ್ಟಿರುವುದಕ್ಕೆ ಪುತ್ತೂರಿನ ನಾಗರಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಕೋಟಿ ಚೆನ್ನಯ್ಯರಿಗೆ ಸಂಬಂಧಪಟ್ಟ ಪ್ರಮುಖ ಸ್ಥಳಗಳು ಪಡುಮಲೆ ಮತ್ತು ಗೆಜ್ಜೆಗಿರಿಗಳಲ್ಲಿ ಇರುವುದರಿಂದ ಪುತ್ತೂರಿನ ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರಿಡಬೇಕು ಎಂದು ಪ್ರಸ್ತಾಪವಿತ್ತು.
ಮಂಗಳೂರು: ಅಲೆಗಳ ತೀವ್ರತೆಯಿಂದ ಆಯ ತಪ್ಪಿ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…