ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದಲ್ಲಿರುವ ಬಾಡಿಗೆ ಮನೆಯಲ್ಲಿ MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 14 ಗ್ರಾಂ ನಿಷೇಧಿತ ಮಾದಕ ಮನೋನ್ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸ್ ಉಪನಿರೀಕ್ಷಕ ಜನಾರ್ಧನ ಕೆ.ಎಂ ಅವರ ನೇತೃತ್ವದ ಪುತ್ತೂರು ನಗರ ಪೊಲೀಸ್ ತಂಡವು ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್ ಬಳಿ ಇರುವ ವೀಣಾ ಎಂಬವರ ಬಾಬ್ತು ಬಾಡಿಗೆ ಕೋಣೆಯಲ್ಲಿ ತಪಾಸಣೆ ನಡೆಸುವ ವೇಳೆ ಆರೋಪಿಯನ್ನು ಪತ್ತೆ ಹಚ್ಚಿದೆ.
ಬಂಧಿತನನ್ನು ಪುತ್ತೂರು ಕಬಕದ ಮಹಮ್ಮದ್ ಮುಸ್ತಪಾ (36) ಎಂದು ಗುರುತಿಸಲಾಗಿದೆ.
ಅಕ್ರಮವಾಗಿ MDMA ನ್ನು ತನ್ನ ಬಳಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.109/2025ರಂತೆ NDPS ಕಾಯ್ದೆಯ ಕಲಂ 8(C), 22(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸ್ ಮಾಹಿತಿ ಪ್ರಕಾರ ಮಹಮ್ಮದ್ ಮುಸ್ತಫಾ ವಿರುದ್ಧ ಈಗಾಗಲೇ ಅನೇಕ ಗಂಭೀರ ಪ್ರಕರಣಗಳು ದಾಖಲಾಗಿವೆ: ಈ ಪ್ರಕರಣದಲ್ಲಿ ಆರೋಪಿಗೆ ಮೂರು ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. ಮಾದಕ ವಸ್ತು ಮಾರಾಟ ಪ್ರಕರಣಗಳು ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿವೆ.
ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…