ಪುತ್ರನ ಲಂಚ ಪ್ರಕರಣ – KSDL ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ರಾಜೀನಾಮೆ – Vishwanews24

Featured, ರಾಜ್ಯ ನ್ಯೂಸ್

ಪುತ್ರನ ಲಂಚ ಪ್ರಕರಣ – ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ರಾಜೀನಾಮೆ

ಬೆಂಗಳೂರು: ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ನಿಗಮದ (KSDL) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರ ಸೂಚನೆ ಮೇರೆಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುವಾರ ರಾತ್ರಿಯೇ ರಾಜೀನಾಮೆಗೆ ಸಿಎಂ ಸೂಚನೆ ನೀಡಿದ್ದರು. ಜೊತೆಗೆ ಕಾನೂನು ಕ್ರಮ ಎದುರಿಸುವಂತೆಯೂ ಸೂಚಿಸಿದ್ದರು.

ಕಾಪು: ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ : ದೂರು ದಾಖಲು – Vishwanews24

ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ಮಾಡಾಳ್‌ 40 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಪ್ರಶಾಂತ್‌ ಮತ್ತು ಸಹಚರರನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಲೋಕಾಯುಕ್ತ ಮುಂದಾಗಿದೆ. ಅಲ್ಲದೇ ಬಂಧಿತರನ್ನು ಪೊಲೀಸ್‌ ಕಸ್ಟಡಿಗೆ ವಹಿಸುವಂತೆ ಮನವಿ ಮಾಡಲಿದೆ.

ಪ್ರಶಾಂತ್‌ನನ್ನು ಬಂಧಿಸಿದ ಬೆನ್ನಲ್ಲೇ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಒಟ್ಟು 7.72 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಈ ಬಾರಿಯೂ ಮೋದಿ ಹೆಸರಿನಲ್ಲಿ ವೋಟ್ ಹಾಕಿ ಎಂದು ಬರುವ ನಾಲಾಯಕರಿಗೆ ಚಪ್ಪಲಿಯಲ್ಲಿ ಹೊಡಿರಿ : ಪ್ರಮೋದ್‌ ಮುತಾಲಿಕ್‌ – Vishwanews24

ರಾಜ್ಯ ಲೆಕ್ಕಪತ್ರ ಇಲಾಖೆಯ ಜಂಟಿ ನಿಯಂತ್ರಕರಾಗಿರುವ ಪ್ರಶಾಂತ್‌, ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ತಂದೆ ಮಾಡಾಳ್‌ ವಿರೂಪಾಕ್ಷಪ್ಪ ಅಧ್ಯಕ್ಷರಾಗಿರುವ ಕೆಎಸ್‌ಡಿಎಲ್‌ ಟೆಂಡರ್‌ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿ, ರಾಸಾಯನಿಕ ಸರಬರಾಜು ವೇಳಾಪಟ್ಟಿ ಮತ್ತು ಕಾರ್ಯಾದೇಶ ವಿತರಿಸಲು 81 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಗುತ್ತಿಗೆದಾರ ಶ್ರೇಯಸ್‌ ಕಶ್ಯಪ್‌ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

Leave a Reply