ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ನಿಗಮದ (KSDL) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುವಾರ ರಾತ್ರಿಯೇ ರಾಜೀನಾಮೆಗೆ ಸಿಎಂ ಸೂಚನೆ ನೀಡಿದ್ದರು. ಜೊತೆಗೆ ಕಾನೂನು ಕ್ರಮ ಎದುರಿಸುವಂತೆಯೂ ಸೂಚಿಸಿದ್ದರು.
ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಪ್ರಶಾಂತ್ ಮತ್ತು ಸಹಚರರನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಲೋಕಾಯುಕ್ತ ಮುಂದಾಗಿದೆ. ಅಲ್ಲದೇ ಬಂಧಿತರನ್ನು ಪೊಲೀಸ್ ಕಸ್ಟಡಿಗೆ ವಹಿಸುವಂತೆ ಮನವಿ ಮಾಡಲಿದೆ.
ಪ್ರಶಾಂತ್‌ನನ್ನು ಬಂಧಿಸಿದ ಬೆನ್ನಲ್ಲೇ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಒಟ್ಟು 7.72 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ.
ರಾಜ್ಯ ಲೆಕ್ಕಪತ್ರ ಇಲಾಖೆಯ ಜಂಟಿ ನಿಯಂತ್ರಕರಾಗಿರುವ ಪ್ರಶಾಂತ್, ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ತಂದೆ ಮಾಡಾಳ್ ವಿರೂಪಾಕ್ಷಪ್ಪ ಅಧ್ಯಕ್ಷರಾಗಿರುವ ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿ, ರಾಸಾಯನಿಕ ಸರಬರಾಜು ವೇಳಾಪಟ್ಟಿ ಮತ್ತು ಕಾರ್ಯಾದೇಶ ವಿತರಿಸಲು 81 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಗುತ್ತಿಗೆದಾರ ಶ್ರೇಯಸ್ ಕಶ್ಯಪ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…