Featured

ಪುತ್ರನ ವಂಚನೆ ಪ್ರಕರಣ : ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪಕ್ಷದಿಂದ ಉಚ್ಛಾಟನೆ – vishwanews24

ಪುತ್ರನ ವಂಚನೆ ಪ್ರಕರಣ :  ಆರೋಪಿಯ ತಂದೆ ಪುತ್ತೂರು ಬಿಜೆಪಿ ಮುಖಂಡ ಪಕ್ಷದಿಂದ ಉಚ್ಛಾಟನೆ

ಮಂಗಳೂರು :  ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೃಷ್ಣ ಜೆ. ರಾವ್ ತಂದೆ ಹಾಗೂ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರನ್ನು ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಪಕ್ಷದಿಂದ ಉಚ್ಛಾಟಿಸಿದೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು, ಜಗನ್ನಿವಾಸ ರಾವ್ ಅವರು ಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸದ ಕಾರಣ ಅವರನ್ನು ಪಕ್ಷದಿಂದ ಹೊರಹಾಕಲಾಗಿದೆ. ಪ್ರಕರಣ ಬೆಳಕಿಗೆ ಬಂದ ತಕ್ಷಣ ಜಗನ್ನಿವಾಸ ರಾವ್ ಅವರಿಗೆ ನೋಟಿಸ್ ನೀಡಲಾಗಿತ್ತು. ಪಕ್ಷದ ಚಟುವಟಿಕೆಗಳಿಂದ ದೂರ ಇಡಲಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

ಒಂದು ವೇಳೆ ಡಿಎನ್‌ಎ ಪರೀಕ್ಷೆಯಲ್ಲಿ ಕೃಷ್ಣ ಜೆ. ರಾವ್ ಮಗುವಿನ ತಂದೆ ಎಂದು ಸಾಬೀತಾದರೆ, ಆ ಯುವತಿಯನ್ನು ತನ್ನ ಮಗ ಮದುವೆಯಾಗುವಂತೆ ಮಾಡುವುದಾಗಿ ಜಗನ್ನಿವಾಸ ರಾವ್ ಪಕ್ಷಕ್ಕೆ ಭರವಸೆ ನೀಡಿದ್ದರು. ಇದೇ ರೀತಿಯ ಭರವಸೆಯನ್ನು ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೂ ನೀಡಿದ್ದರು ಎನ್ನಲಾಗಿದೆ. ಆದರೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಹೀಗಾಗಿ ಪಕ್ಷವು ಅವರನ್ನು ಉಚ್ಛಾಟಿಸುವ ನಿರ್ಧಾರ ಕೈಗೊಂಡಿದೆ.

ಈ ಪ್ರಕರಣವು ಕಾನೂನಾತ್ಮಕವಾಗಿ ಅಂತ್ಯ ಕಾಣುವವರೆಗೆ ಹಾಗೂ ಸಂತ್ರಸ್ತ ಯುವತಿಗೆ ನ್ಯಾಯ ಸಿಗುವವರೆಗೆ ಪಕ್ಷವು ಹೋರಾಟ ಮುಂದುವರಿಸಲಿದೆ ಎಂದು ಅವರು ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago