ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೃಷ್ಣ ಜೆ. ರಾವ್ ತಂದೆ ಹಾಗೂ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರನ್ನು ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಪಕ್ಷದಿಂದ ಉಚ್ಛಾಟಿಸಿದೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು, ಜಗನ್ನಿವಾಸ ರಾವ್ ಅವರು ಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸದ ಕಾರಣ ಅವರನ್ನು ಪಕ್ಷದಿಂದ ಹೊರಹಾಕಲಾಗಿದೆ. ಪ್ರಕರಣ ಬೆಳಕಿಗೆ ಬಂದ ತಕ್ಷಣ ಜಗನ್ನಿವಾಸ ರಾವ್ ಅವರಿಗೆ ನೋಟಿಸ್ ನೀಡಲಾಗಿತ್ತು. ಪಕ್ಷದ ಚಟುವಟಿಕೆಗಳಿಂದ ದೂರ ಇಡಲಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.
ಒಂದು ವೇಳೆ ಡಿಎನ್‌ಎ ಪರೀಕ್ಷೆಯಲ್ಲಿ ಕೃಷ್ಣ ಜೆ. ರಾವ್ ಮಗುವಿನ ತಂದೆ ಎಂದು ಸಾಬೀತಾದರೆ, ಆ ಯುವತಿಯನ್ನು ತನ್ನ ಮಗ ಮದುವೆಯಾಗುವಂತೆ ಮಾಡುವುದಾಗಿ ಜಗನ್ನಿವಾಸ ರಾವ್ ಪಕ್ಷಕ್ಕೆ ಭರವಸೆ ನೀಡಿದ್ದರು. ಇದೇ ರೀತಿಯ ಭರವಸೆಯನ್ನು ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೂ ನೀಡಿದ್ದರು ಎನ್ನಲಾಗಿದೆ. ಆದರೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಹೀಗಾಗಿ ಪಕ್ಷವು ಅವರನ್ನು ಉಚ್ಛಾಟಿಸುವ ನಿರ್ಧಾರ ಕೈಗೊಂಡಿದೆ.
ಈ ಪ್ರಕರಣವು ಕಾನೂನಾತ್ಮಕವಾಗಿ ಅಂತ್ಯ ಕಾಣುವವರೆಗೆ ಹಾಗೂ ಸಂತ್ರಸ್ತ ಯುವತಿಗೆ ನ್ಯಾಯ ಸಿಗುವವರೆಗೆ ಪಕ್ಷವು ಹೋರಾಟ ಮುಂದುವರಿಸಲಿದೆ ಎಂದು ಅವರು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…