ಪುನೀತ್ ಅವರಿಗೆ ಪದ್ಮಶ್ರೀ ಕುರಿತು ಚರ್ಚಿಸಿ ಕೇಂದ್ರಕ್ಕೆ ಶಿಫಾರಸ್ಸು : ಸಿಎಂ ಬೊಮ್ಮಾಯಿ – Vishwanews24

Featured, ರಾಜ್ಯ ನ್ಯೂಸ್

ಪುನೀತ್ ಅವರಿಗೆ ಪದ್ಮಶ್ರೀ ಕುರಿತು ಚರ್ಚಿಸಿ ಕೇಂದ್ರಕ್ಕೆ ಶಿಫಾರಸ್ಸು : ಸಿಎಂ

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತು ಅವರ ಕುಟುಂಬ ವರ್ಗದವರೊಂದಿಗೆ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕಾದರೆ ಕೆಲವು ರೀತಿನೀತಿಗಳಿವೆ. ಅವುಗಳೆಲ್ಲವನ್ನು ಪಾಲಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ಪುನೀತ್ ರಾಜ್‍ಕುಮಾರ್ ಅವರ ಕುಟುಂಬದವರ ಜೊತೆ ಸದ್ಯದಲ್ಲೇ ಚರ್ಚೆ ಮಾಡುತ್ತೇವೆ. ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂಬುದು ಬಹುತೇಕರ ಒತ್ತಾಸೆಯಾಗಿದೆ ಸೂಕ್ತ ಸಂದರ್ಭದಲ್ಲಿ ಚರ್ಚೆ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಗುವುದು ಎಂದರು.

ಅಂತರಾಷ್ಟ್ರೀಯ ವಿಮಾನ ಪ್ರಯಾಣದ ಮೇಲಿನ ನಿರ್ಬಂಧ ಹಿಂಪಡೆದ ಅಮೇರಿಕಾ – Vishwanews24