Featured

ಪುನೀತ್ ಜನ್ಮದಿನವನ್ನು ಸ್ಫೂರ್ತಿ ದಿನ ಹೆಸರಿನಲ್ಲಿ ಆಚರಿಸಲಾಗುವುದು : ಸಿಎಂ ಘೋಷಣೆ – Vishwanews24

ಪುನೀತ್ ಜನ್ಮದಿನವನ್ನು ಸ್ಫೂರ್ತಿ ದಿನ ಹೆಸರಿನಲ್ಲಿ ಆಚರಿಸಲಾಗುವುದು : ಸಿಎಂ ಘೋಷಣೆ

ಬೆಂಗಳೂರು : ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ದಿನವನ್ನು ಸ್ಫೂರ್ತಿ ದಿನ ಹೆಸರಿನಲ್ಲಿ ಆಚರಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

ಈ ಹಿಂದಿನ ಸರಕಾರ ಘೋಷಣೆ ಮಾಡಿತ್ತು. ಆದರೆ, ಚುನಾವಣೆ ಕಾರಣದಿಂದಾಗಿ ಆಚರಿಸಲು ಆಗಿಲ್ಲ. ಆದರೆ, ನಮ್ಮ ಸರಕಾರ ಆ ದಿನವನ್ನು ಸ್ಫೂರ್ತಿ ದಿನ ಎಂದು ಆಚರಿಸಲಾಗುವುದು ಎಂದು ತಿಳಿಸಿದರು.

ಕಲೆ ಮತ್ತು ತಂತ್ರಜ್ಞಾನದ ಮೂಲಕ ವಿದೇಶಿ ಕಲಾವಿದರಿಂದ ಸಿದ್ದಗೊಂಡ ಪಿಆರ್‌ಕೆ ಕಲಾಕೃತಿ ಅ.16 ಖಾಸಗಿ ಹೋಟೆಲ್‌ನಲ್ಲಿ ಅನಾವರಣ ಆಗಿದೆ. ಪುನೀತ್ ಹುಟ್ಟು ಹಾಕಿರೋ ಪಿಆರ್‌ಕೆ ಸ್ಟುಡಿಯೋಸ್ ಸಹಯೋಗದಲ್ಲಿ ಅಪ್ಪು ಕಲಾಕೃತಿ ಬಿಡುಗಡೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್‌ ಕುಟುಂಬದ ಜೊತೆ ಸಿಎಂ ಸಿದ್ದರಾಮಯ್ಯ ಕೂಡ ಸಾಥ್‌ ನೀಡಿದರು.

ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದು ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆ ಅನಾವರಣ ಮಾಡಿದ್ದೇವೆ. ಈ ಪ್ರತಿಮೆಯನ್ನ N3K ಸ್ಟುಡಿಯೋಸ್- ಪಿಆರ್‌ಕೆ ಸ್ಟುಡಿಯೋಸ್ ಸಹಯೋಗದಲ್ಲಿ ಮಾಡಿದ್ದಾರೆ. ಕರ್ನಾಟಕ ಕಂಡಂತಹ ಸರಳ, ಸೌಜನ್ಯ ವ್ಯಕ್ತಿತ್ವ ಹೊಂದಿರುವ ವ್ಯಕ್ತಿ ಪುನೀತ್ ಅವರಾಗಿದ್ದರು. ಇಡೀ ಕರ್ನಾಟಕದಲ್ಲಿ ಬಹುಶಃ ಇವರಷ್ಟು ಅಭಿಮಾನಿಗಳನ್ನ ಯಾರೂ ಪಡೆದುಕೊಂಡಿರಲಿಲ್ಲ ಎಂದು ಹೇಳಿದರು.

ಪುನೀತ್ ಕಲಾಕೃತಿಯನ್ನ ಆಂತ್ರಾಪೋಸ್ಟಾ ತಂತ್ರಜ್ಞಾನ ಬಳಸಿ ಮಾಡಲಾಗಿದ್ದು, ಇದಕ್ಕಾಗಿ ಸಾಕಷ್ಟು ಸಂಶೋಧನೆ ಮಾಡಿದ್ದೇನೆ ಎಂದು ಕಲಾವಿದ ವಿಚಾರ್ ಮಾತನಾಡಿದ್ದಾರೆ. ಆಸ್ಕರ್ ವಿನ್ನಿಂಗ್ ಅವತಾರ್ ಮೂವಿಗೆ ಬಳಸಿರೋ Z ಬ್ರಷ್ ಸಾಫ್ಟ್‌ವೇರ್ ಬಳಸಿ ಮಾಡಲಾಗಿದೆ. ಬೇರೆ ಬೇರೆ ರೀತಿಯ ಲೈಟಿಂಗ್ ಬಳಸಿ ಮಾಡಲಾಗಿದೆ. ಡಿಜಿಟಲ್‌ನಲ್ಲಿ ಮಾಡಿ, ತ್ರೀಡಿಯಲ್ಲಿ ಮಾಡಿದ್ದೇನೆ. ಇದು ನನ್ನ ಬಹಳ ದಿನದ ಕನಸು ಕನಸಾಗಿತ್ತು. ಈಗ ನನಸಾಗಿದೆ ಎಂದು ಕಲಾವಿದ ವಿಚಾರ್ ಹೇಳಿದ್ದಾರೆ.

ರಾಘಣ್ಣ ಮಾತನಾಡಿ, ಈ ತಿಂಗಳ 29ಕ್ಕೆ ಅಪ್ಪು ಅಗಲಿ ಎರಡು ವರ್ಷ ಆಗಲಿದೆ. ಇಂದು ಈ ಪ್ರತಿಮೆ ಪ್ರೀತಿಯಿಂದ ತಯಾರಾಗಿದೆ. ಈ ಪ್ರತಿಮೆಯನ್ನು ಕಷ್ಟ ಪಟ್ಟು ಮಾಡಿಲ್ಲ, ಇಷ್ಟ ಪಟ್ಟು ಮಾಡಿದ್ದಾರೆ ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

19 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago