ಚೆನ್ನೈ : ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸಿನಿಮಾ ಲೋಕದ ಸ್ನೇಹಿತರು ಗೆಳೆಯನ ಸ್ಮರಿಸಿದ್ದಾರೆ.
ಪುನೀತ್ ಅಕಾಲಿಕ ಮರಣದ ನೋವನ್ನು ಅನಿವಾರ್ಯವಾಗಿ ಅರಗಿಸಿಕೊಳ್ಳಬೇಕಾಗಿದೆ. ಪುನೀತ್ ರಾಜ್ ಕುಮಾರ್ ಸುಮಾರು 1800 ಮಕ್ಕಳ (Children)ವಿದ್ಯಾಭ್ಯಾಸದ (Education)ಹೊಣೆ ಹೊತ್ತಿದ್ದರು.
ಪುನೀತ್ ಅವರಿಗೆ ನಮನ ಸಲ್ಲಿಸುತ್ತ ಮಾತನಾಡಿದ ವಿಶಾಲ್ (Actor Vishal) ಈ ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದು ತಿಳಿಸಿದ್ದಾರೆ. ಇಂಥದ್ದೊಂದು ಕಾರ್ಯಕ್ರಮದಲ್ಲಿ ಮಾತನಾಡಬೇಕಾಗುತ್ತದೆ ಎನ್ನುವ ಯಾವ ಅಂದಾಜು ಇರಲಿಲ್ಲ. ಪುನೀತ್ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ ಎಂದು ವಿಶಾಲ್ ಹೇಳಿದರು. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ವಿಶಾಲ್ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
ಸಿನಿಮಾದಲ್ಲಿ ನಾಯಕರಾಗಿರುವ ಜತೆ ಪುನೀತ್ ನಿಜಜೀವನದಲ್ಲಿಯೂ ನಾಯಕರಾಗಿ ಕೆಲಸ ಮಾಡಿಕೊಂಡು ಬಂದವರು. ಅನಾಥರು, ಮಾರಕ ರೋಗಗಳಿಂದ ಬಳಲುತ್ತಿರುವವರ ಸಹಾಯಕ್ಕೆ ಧಾವಿಸುತ್ತಿದ್ದರು. ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದರು.
ಪವರ್ ಸ್ಟಾರ್ ಎಂದು ಜನರಿಂದ ಕರೆಸಿಕೊಳ್ಳುವ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ನಿಧನ ಹೊಂದಿದ್ದರು. ಇಡೀ ಕರ್ನಾಟಕ ಸೇರಿ ಎಲ್ಲ ಚಿತ್ರರಂಗಗಳು ಕಂಬನಿ ಮಿಡಿದಿದ್ದವು. ಭಾನುವಾರ ಬೆಳಗ್ಗೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿತ್ತು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…