Featured

ಪುರಿಯ ಜಗನ್ನಾಥ ದೇವಾಲಯದ ಎಲ್ಲಾ 4 ದ್ವಾರಗಳು ಓಪನ್ – ಒಡಿಶಾ ಬಿಜೆಪಿ ಸರ್ಕಾರದಿಂದ ಮೊದಲ ಭರವಸೆ ಈಡೇರಿಕೆ – vishwanews24

ಪುರಿಯ ಜಗನ್ನಾಥ ದೇವಾಲಯದ ಎಲ್ಲಾ 4 ದ್ವಾರಗಳು ಓಪನ್ – ಒಡಿಶಾ ಬಿಜೆಪಿ ಸರ್ಕಾರದಿಂದ ಮೊದಲ ಭರವಸೆ ಈಡೇರಿಕೆ

ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ  ನಾಲ್ಕು ದ್ವಾರಗಳನ್ನು ಇಂದು (ಜೂ.13) ತೆರೆಯಲಾಗಿದೆ.

ಚುನಾವಣೆಗೂ ಮುನ್ನ ಬಿಜೆಪಿ ಗೆದ್ದರೆ ದೇವಾಲಯದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ತೆರೆಯುವುದಾಗಿ ಹೆಳಿತ್ತು. ಇದೀಗ ನೂತನವಾಗಿ ರಚನೆಯಾದ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯನ್ನು ನೆರವೇರಿಸಿದೆ. ಬೆಳಗ್ಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ  ಪುರಿ ಸಂಸದ ಸಂಬಿತ್ ಪಾತ್ರ ಸೇರಿದಂತೆ ಬಿಜೆಪಿಯ ನಾಯಕರು ತೆರಳಿ ದೇವಾಲಯದ ದ್ವಾರಗಳನ್ನು ತೆರೆಯುವ ಮಹತ್ವದ ಕ್ಷಣದಲ್ಲಿ ಭಾಗಿಯಾಗಿದ್ದರು.

 

ಮಾಂಝಿ ಅವರು ಬುಧವಾರದ ತಮ್ಮ ಮೊದಲ ಕ್ಯಾಬಿನೆಟ್ ಸಭೆಯಲ್ಲಿ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಮುಚ್ಚಲ್ಪಟ್ಟಿರುವ ಪವಿತ್ರ ದೇಗುಲದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ಮತ್ತೆ ತೆರೆಯುವ ಪ್ರಸ್ತಾಪವನ್ನು ಅನುಮೋದಿಸಿದರು. ಅಲ್ಲದೇ 12ನೇ ಶತಮಾನದ ಈ ದೇಗುಲದ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ 500 ಕೋಟಿ ರೂ. ಮೌಲ್ಯದ ಕಾರ್ಪಸ್ ನಿಧಿಯನ್ನು ಸ್ಥಾಪಿಸುವುದಾಗಿ ಕ್ಯಾಬಿನೆಟ್ ಘೋಷಿಸಿತು.

ಪುರಿಯ ಜಗನ್ನಾಥ ದೇವಾಲಯದಲ್ಲಿ ನಾಲ್ಕು ದ್ವಾರಗಳಿವೆ. ಅವುಗಳೆಂದರೆ ಸಿಂಹದ್ವಾರ, ಅಶ್ವದ್ವಾರ, ವ್ಯಾಘ್ರದ್ವಾರ, ಮತ್ತು ಹಸ್ತಿದ್ವಾರ. ಈ ದ್ವಾರಗಳು ದೇವಾಲಯದ ನಾಲ್ಕು ಬದಿಗಳಲ್ಲಿದೆ. ಕೋವಿಡ್ ಹರಡುತ್ತಿದ್ದ ಸಮಯದಲ್ಲಿ ಈ ಬಾಗಿಲುಗಳನ್ನು ಮುಚ್ಚಲಾಗಿತ್ತು. ನಂತರ, ಭಕ್ತರಿಗೆ ಸಿಂಹದ್ವಾರದ ಮೂಲಕ ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿತ್ತು. ಇದರಿಂದಾಗಿ ಭಾರೀ ಜನದಟ್ಟಣೆಯಿಂದ ಭಕ್ತರು ಸಂಕಷ್ಟಪಡುವಂತಾಗಿತ್ತು. ಈ ಎಲ್ಲಾ ದ್ವಾರಗಳನ್ನು ತೆರೆಯುವುದು ಬಿಜೆಪಿಯ ದೊಡ್ಡ ಚುನಾವಣಾ ಭರವಸೆಗಳಲ್ಲಿ ಒಂದಾಗಿತ್ತು.

ಬುಧವಾರ (ಜೂ.12) ಭುವನೇಶ್ವರದಲ್ಲಿ ಒಡಿಶಾದ (Odisha) ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮಾಝಿ ಪ್ರಮಾಣ ವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಭಾಗವಹಿಸಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago