ಪುತ್ತೂರು: ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗ ಕಾಮಿಗಳಿದ್ದಾರೆ ಎನ್ನುವ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದು, ರಾಜ್ಯ ಸರಕಾರ ತತ್ ಕ್ಷಣ ಅವರನ್ನು ಹುದ್ದೆಯಿಂದ ಕಿತ್ತುಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ಬುಧವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ “ಬಿಳಿಮಲೆಯವರು ಯಕ್ಷಗಾನ ಕಲಾವಿದರಿಗೆ ಮಾತ್ರವಲ್ಲ ಕರಾವಳಿ ಭಾಗಕ್ಕೆ ಮಾತ್ರವಲ್ಲ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ.ಇದು ಕಾಂಗ್ರೆಸ್ ಪಕ್ಷದ ಮನಸ್ಥಿತಿ. ಅವರಿಗೆ ಕರಾವಳಿಯ ಕಲೆ, ಸಂಸ್ಕೃತಿ ಮತ್ತು ಪರಂಪರೆ ಕುರಿತಾಗಿ ಕಿಂಚಿತ್ ಗೌರವವಿದ್ದರೆ ಈ ಹೇಳಿಕೆ ನೀಡುತ್ತಿರಲಿಲ್ಲ” ಎಂದು ಕಿಡಿ ಕಾರಿದರು.
”ಹಿಂದೂ ಸಮಾಜಕ್ಕೆ ಅಪಮಾನವಾಗಿದ್ದು, ಬಿಜೆಪಿ ಮಾತ್ರವಲ್ಲ, ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗುತ್ತದೆ.ಸರಕಾರ ತತ್ ಕ್ಷಣ ಹುದ್ದೆಯಿಂದ ಕಿತ್ತು ಬಿಸಾಕಬೇಕು’ ಎಂದು ಒತ್ತಾಯಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…