ಪುಲ್ವಾಮಾದಲ್ಲಿ ಮತ್ತೆ ಗುಂಡಿನ ಚಕಮಕಿ: ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮ – Vishwanews24
ಶ್ರೀನಗರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದೆ. ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಕಳೆದ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿ 8 ಉಗ್ರರ ತಂಡ ಗಡಿ ನುಸುಳುತ್ತಿದ್ದ ವೇಳೆ 36ನೇ ರಾಷ್ಟ್ರೀಯ ರೈಫಲ್ ಬೆಟಾಲಿಯನ್ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಇನ್ನು ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. . ಗುಂಡಿನ ದಾಳಿಗೆ ಮುಷ್ತಾಕ್ ಅಹ್ಮದ್ ಎಂಬ ನಾಗರಿಕ ಕೂಡ ಬಲಿಯಾಗಿದ್ದಾರೆ.
ಇಬ್ಬರು ಅಥವಾ ಮೂವರು ಉಗ್ರರು ಇರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರಿದಿದೆ. 60 ಕೆ.ಜಿ. ಆರ್ಡಿಎಕ್ಸ್ನೊಂದಿಗೆ ಉಗ್ರರು ಮಾಡಿದ ದಾಳಿಯಲ್ಲಿ 40 ಸಿಬ್ಬಂದಿ ಹುತಾತ್ಮರಾದ ಕೆಲವೇ ದಿನಗಳಲ್ಲಿ ನಡೆದ ಮೊದಲ ಕಾರ್ಯಾಚರಣೆ ಇದಾಗಿದೆ.
Visuals: The 4 Army personnel including a Major, who were killed in action during encounter between terrorists and security forces, in Pinglan area of Pulwama district, belonged to 55 Rashtriya Rifles. #JammuAndKashmir (Visuals deferred by unspecified time) pic.twitter.com/Wa2sxz3bzT
— ANI (@ANI) February 18, 2019
