Featured

ಪುಲ್ವಾಮಾ ದಾಳಿಗೆ ಪ್ರತೀಕಾರ: ಪಾಕ್ ಉಗ್ರ ನೆಲೆಯ ಮೇಲೆ ಏರ್ ಸ್ಟ್ರೈಕ್ ದಾಳಿ – Vishwanews24

ನವದೆಹಲಿ,:ಪುಲ್ವಾಮಾ ಉಗ್ರ ದಾಳಿಯ ಪ್ರತಿಕಾರವಾಗಿ ಭಾರತವೂ ಪಾಕ್ ಉಗ್ರ ನೆಲೆಗಳ ಮೇಲೆ ನಡೆಸಿದ ಏರ್ ಸ್ಟ್ರೈಕ್ ಪ್ರತೀಕಾರದ ದಾಳಿಯಲ್ಲಿ ಉಗ್ರ ಸಂಘಟನೆಯ ಮೂರು ಕಂಟ್ರೋಲ್ ರೂಂ ಸರ್ವನಾಶವಾಗಿದೆ ಎಂದು ತಿಳಿದು ಬಂದಿದೆ. ಕೇವಲ 21 ನಿಮಿಷಗಳ ದಾಳಿಯಲ್ಲಿ ಸುಮಾರು 500 ಮೀಟರ್ ನಷ್ಟು ಸ್ಥಳ ಸಂಪೂರ್ಣವಾಗಿ ದ್ವಂಸವಾಗಿದೆ.

ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆಯ ಅಡಗು ದಾಣಗಳ ಮೇಲೆ ಕಳೆದ ರಾತ್ರಿ 3.30ರ ಸುಮಾರಿಗೆ 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆಜಿ ಬಾಂಬ್ ದಾಳಿ ಮಾಡಿದ್ದು ಪರಿಣಾಮ 500 ಮೀಟರ್ ಪ್ರದೇಶ ಸಂಪೂರ್ಣ ಸರ್ವನಾಶವಾಗಿದೆ ಎಂದು ತಿಳಿದುಬಂದಿದೆ.

ಭಾರತೀಯ ವಾಯುಸೇನೆಯ ಮಿರಾಜ್ 2000 ಯುದ್ಧ ವಿಮಾನಗಳನ್ನು ದಾಳಿ ಸಂದರ್ಭ ಬಳಕೆ ಮಾಡಿದ್ದು, ಕ್ಷಿಪ್ರ ವಾಯುದಾಳಿಯಲ್ಲಿ ಆಕ್ರಮಿತ ಕಾಶ್ಮೀರ ಭಾಗದಲ್ಲಿದ್ದ ಜೈಶ್-ಎ-ಮಹಮ್ಮದ್ ಉಗ್ರಗಾಮಿ 3 ನೆಲೆಗಳನ್ನು ಸರ್ವನಾಶ ಮಾಡಿದೆ.

ಗಡಿನಿಯಂತ್ರಣ ರೇಖೆಯನ್ನು ದಾಟಿದ  ವಾಯುಸೇನೆಯ ವಿರಾಜ್ ಫೈಟರ್ ಜೆಟ್ ಗಳು ಪಾಕಿಸ್ಥಾನದ ರಾಡಾರ್ ವ್ಯವಸ್ಥೆಯನ್ನು ಜಾಮ್ ಗೊಳಿಸಿ ಜೈಶ್ ನ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಮೊದಲ ದಾಳಿಯನ್ನು ಮುಂಜಾನೆ 3.45ರ ವೇಳೆಗೆ ಬಾಲ್‍ಕೋಟ್ ಮೇಲೆ ಮಾಡಿದೆ. ನಂತರ ಮುಂಜಾನೆ 3.48ಕ್ಕೆ ಮುಜಾಫರ್ ಬಾದ್ ಮೇಲೆ ದಾಳಿ ಮಾಡಿದೆ. ಕೊನೆಗೆ ಮುಂಜಾನೆ 3.58ಕ್ಕೆ ಚಕೋಟಿ ಉಗ್ರರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದೆ.

ಭಾರತೀಯ ಸೇನೆಯ ಯುದ್ಧ ವಿಮಾನ ಮುಜಾಫ್ಫರಾಬಾದ್ ಗೆ ಬಂದಿತ್ತು. ಈ ವೇಳೆ ಪಾಕಿಸ್ತಾನ ಸೇನೆ ತಕ್ಷಣವೇ ಕಾರ್ಯಾಚರಣೆ ಮಾಡಿತ್ತು. ಇದರಿಂದ ಭಾರತದ ಯುದ್ಧ ವಿಮಾನ ವಾಪಸಾಗಿದೆ ಎಂದು ಮೇಜರ್ ಜನರಲ್ ಅಸೀಫ್ ಗಫರ್ ಹೇಳಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago