Featured

ಪುಲ್ವಾಮಾ ದಾಳಿಗೆ 7 ವರ್ಷ: ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ – vishwanews24

ಪುಲ್ವಾಮಾ ದಾಳಿಗೆ 7 ವರ್ಷ: ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

ಹೊಸದಿಲ್ಲಿ: ಪುಲ್ವಾಮಾ ದಾಳಿ ನಡೆದು 7 ವರ್ಷದ ಹಿನ್ನೆಲೆ ಘಟನೆಯಲ್ಲಿ ಮೃತಪಟ್ಟ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಹುತಾತ್ಮ ಯೋಧರನ್ನು ವೀರ ಸೇನಾನಿಗಳು ಎಂದು ಶ್ಲಾಘಿಸಿದ್ದಾರೆ.

“2019ರ ಈ ದಿನ ಪುಲ್ವಾಮಾ ದಾಳಿಯಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ವೀರ ಸೇನಾನಿಗಳನ್ನು ಸ್ಮರಿಸುತ್ತಿದ್ದೇವೆ. ಅವರ ದೇಶಭಕ್ತಿ ಮತ್ತು ಸೇವೆ ಸದಾ ನಮ್ಮ ಮನಸ್ಸಿನಲ್ಲಿ ಉಳಿಯುತ್ತದೆ. ಅವರ ಧೈರ್ಯವು ಪ್ರತಿಯೊಬ್ಬ ಭಾರತೀಯನಿಗೂ ಪ್ರೇರಣೆ ನೀಡುತ್ತದೆ” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ :

ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಪುಲ್ವಾಮಾ ದಾಳಿಯ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದು, “2019ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹತರಾದ ವೀರ ಯೋಧರಿಗೆ ನನ್ನ ಹೃದಯಪೂರ್ವಕ ಗೌರವ ನಮನಗಳು. ತಾಯಿ ಭಾರತಿಯನ್ನು ರಕ್ಷಿಸಲು ಅವರು ಮಾಡಿದ ಮಹಾನ್ ತ್ಯಾಗಕ್ಕೆ ದೇಶವೆಂದೂ ಅವರಿಗೆ ಚಿರ ಋಣಿಯಾಗಿರಲಿದೆ” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಕೂಡಾ ಪುಲ್ವಾಮಾ ದಾಳಿಯ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಫೆಬ್ರವರಿ 14, 2019ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಇತಿಹಾಸದಲ್ಲೇ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿಯಲ್ಲಿ 40 ಮಂದಿ ಸಿಆರ್‌ಪಿಎಫ್‌ ಯೋಧರು ಮೃತಪಟ್ಟಿದ್ದರು.

ಇದನ್ನೂ ಓದಿ :

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago