Featured

ಪುಲ್ವಾಮಾ ದಾಳಿಯಂತಹ ಘಟನೆಗಳು ಮಾತ್ರ ಬಿಜೆಪಿಯನ್ನು ರಕ್ಷಿಸಬಲ್ಲವು : ಶರದ್ ಪವಾರ್ -Vishwanews24

ಔರಂಗಾಬಾದ್: ಮಹಾರಾಷ್ಟ್ರ ಜನತೆ ಹಾಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶದಲ್ಲಿದ್ದು, ಪುಲ್ವಾಮ ದಾಳಿಯಂತಹ ಘಟನೆಗಳು ಮಾತ್ರ ಜನರ ಮನಸ್ಥಿತಿ ಬದಲಿಸಬಹುದು ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಔರಂಗಾಬಾದ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಶರದ್ ಪವಾರ್, ಮಹಾರಾಷ್ಟ್ರದಲ್ಲಿ ಜನ ಹಾಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದ ದುರಾಡಳಿತದಿಂದ ಬೇಸತ್ತಿದ್ದಾರೆ. ಈಗ ಚುನಾವಣೆಯಾದರೆ ಬಿಜೆಪಿ ಮತ್ತು ಶಿವಸೇನೆ ಸೋಲು ಖಚಿತ. ಇಂತಹ ಸಂದರ್ಭದಲ್ಲಿ ಪುಲ್ವಾಮಾ ದಾಳಿಯಂತಹ ಘಟನೆಗಳು ಮಾತ್ರ ಬಿಜೆಪಿಯನ್ನು ರಕ್ಷಿಸಬಲ್ಲವು ಎಂದು ಹೇಳಿದ್ದಾರೆ.

ಬಾಲಾಕೋಟ್ ವಾಯುದಾಳಿ ಮೋದಿ ಜನಪ್ರಿಯತೆಯನ್ನು ಹೆಚ್ಚಿಸಿತು. ಇಂತಹ ಕಾರ್ಯ ಮೋದಿಗೆ ಕರಗತವಾಗಿದೆ. ಕೆಲಸ ಮಾಡದಿದ್ದರೂ ಕೆಲಸ ಮಾಡಿದಂತೆ ಮೋದಿ ಪೋಸ್ ನೀಡಿ ಜನಪ್ರಿಯತೆ ಗಳಿಸುತ್ತಾರೆ. ಆದರೆ ಈ ತಂತ್ರಗಾರಿಕೆ ಮಹಾರಾಷ್ಟ್ರದಲ್ಲಿ ನಡೆಯಲಾರದು. ಹಾಲಿ ದೇವೇಂದ್ರ ಫಡ್ನವಿಸ್ ಸರ್ಕಾರದ ದುರಾಡಳಿತ ಜನರನ್ನು ಹೈರಾಣಾಗಿಸಿದೆ. ಈ ಸರ್ಕಾರವನ್ನು ಕಿತ್ತೊಗೆಯಲು ಜನ ಕಾತುರದಿಂದ ಕಾಯುತ್ತಿದ್ದಾರೆ. ಅವರ ಮನಸ್ಥಿತಿ ಬದಲಾಗಬೇಕು ಎಂದರೆ ಮತ್ತೊಂದು ಪುಲ್ವಾಮ ದಾಳಿ ಅಥವಾ ಬಾಲಾಕೋಟ್ ವಾಯುದಾಳಿಯಂತ ಘಟನೆಯಾಗಬೇಕು. ಇಲ್ಲವಾದಲ್ಲಿ ಈ ಸರ್ಕಾರ ಉರುಳುವುದು ಖಚಿತ ಎಂದು ಪವಾರ್ ಹೇಳಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago