ಇಸ್ಲಾಮಾಬಾದ್ : ಜಮ್ಮುಕಾಶ್ಮೀರದ ಪುಲ್ವಾಮ್ ನಲ್ಲಿ ಉಗ್ರನ ಆತ್ಮಾಹುತಿ ದಾಳಿಗೆ ಸಿಆರ್ ಪಿಎಫ್ 42 ಯೋಧರು ಹುತಾತ್ಮರಾಗಿದ್ದಾರೆ. ಆದರೆ ಪಾಕಿಸ್ತಾನ ಈ ಘಟನೆಗೂ ತನಗೂ ಯಾವುದೇ ಸಂಬಂಧವಿಲ್ಲವೆಂದು ಹೇಳಿಕೊಂಡಿದೆ.
‘ಯಾವುದೇ ತನಿಖೆ ನಡೆಸದೆ ಭಾರತದ ಮಾಧ್ಯಮಗಳು ಈ ದಾಳಿಗೆ ಪಾಕ್ ಹೆಸರನ್ನು ಜೋಡಿಸುತ್ತಿರುವುದನ್ನು ನಾವು ಬಲವಾಗಿ ತಿರಿಸ್ಕರಿಸುತ್ತೇವೆ. ಇದೊಂದು ತೀವ್ರ ಆತಂಕದ ವಿಚಾರ’ ಎಂದು ಪಾಕ್ ಸರಕಾರದ ಹೇಳಿಕೆ ತಿಳಿಸಿದೆ.
ಪಾಕ್ ಮೂಲದ ಜೈಷ್ ಎ ಮೊಹಮ್ಮದ್ ಸಂಘಟನೆಯೇ ಈ ಕೃತ್ಯ ಎಸಗಿದ್ದು, ದಾಳಿಯಲ್ಲಿ 42 ಯೋಧರು ಹುತಾತ್ಮರಾಗಿದ್ದು, ಅನೇಕ ಯೋಧರು ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ, ಇದೊಂದು ಗಂಭೀರವಾಗಿ ಕಾಳಜಿ ವಹಿಸಬೇಕಾದ ಸಂಗತಿ ಎಂದು ಹೇಳಿದೆ.
ವಿಶ್ವದ ಎಲ್ಲೇ ಆಗಲಿ ಹಿಂಸಾಚಾರವನ್ನು ಪಾಕ್ ಖಂಡಿಸುತ್ತದೆ. ಆದರೆ ತನಿಖೆ ನಡೆಸದೆ ಘಟನೆಗೂ ಪಾಕ್ ಗೂ ಸಂಬಂಧವಿದೆ ಎಂಬ ಸರ್ಕಾರದ ಹಾಗೂ ಭಾರತೀಯ ಮಾಧ್ಯಮಗಳ ಹೇಳಿಕೆಗಣ್ನು ತಾನು ತಿರಸ್ಕರಿಸುವುದಾಗಿ ಹೇಳಿದೆ.
ಇದೊಂದು ಹೀನಾತಿಹೀನ ಕೃತ್ಯವಾಗಿದ್ದು ಪಾಕಿಸ್ತಾನ ಮೂಲದ ಜೈಷೆ ಮೊಹಮ್ಮದ್ ಭಯೋತ್ಪಾದಕ ಸಂಘಟನೆ ಕೃತ್ಯವಾಗಿದೆ. ಅಂತಾರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರ್ ನೇತೃತ್ವದ ಭಯೋತ್ಪಾದಕ ಸಂಘಟನೆ ಇದಾಗಿದೆ. ಈತನಿಗೆ ಪಾಕಿಸ್ತಾನ ಸರಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದು ಎಲ್ಲೆಡೆ ಮುಕ್ತವಾಗಿ ಓಡಾಡಿಕೊಂಡಿದ್ದಾನೆ. ತನ್ನ ನೆಲದಿಂದ ಭಯೋತ್ಪಾದಕ ಕೃತ್ಯಗಳನ್ನು ಪ್ರಾಯೋಜಿಸುತ್ತಿರುವ ಈತ ಹಾಗೂ ಇತರ ಉಗ್ರರ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳದಿದ್ದಲ್ಲಿ ದಂಡಿಸುವ ಸಂಪೂರ್ಣ ಅಧಿಕಾರ ಭಾರತಕ್ಕಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…