Featured

ಪುಷ್ಪಾನಂದ ಫೌಂಡೇಶನ್-ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ: Vishwanews24

ಪುಷ್ಪಾನಂದ ಫೌಂಡೇಶನ್-ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ: Vishwanews24

ಕಾಪು: ಪುಷ್ಪಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ವತಿಯಿಂದ ಕಾಪು‌ ಪುರಸಭೆ ವ್ಯಾಪ್ತಿಯ ಎಸ್.ಎಸ್.ಎಲ್.ಸಿ ಜಾಗ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆದಿತ್ಯವಾರ ಕಾಪು ಲಕ್ಷ್ಮೀ ಜನಾರ್ದನ ಸಭಾಂಗಣದಲ್ಲಿ ನಡೆಯಿತು.


ಪ್ರಸ್ತಾವಿಕ ಮಾತುಗಳನ್ನಾಡಿದ ಪ್ರವರ್ತಕ ಯಶ್ಪಾಲ್ ಸುವರ್ಣ “ಯಾವುದೇ ರಾಜಕೀಯ ಲೇಪವಿಲ್ಲದೆ ಈ‌ ಕಾರ್ಯಕ್ರಮ ಆಯೋಜಿಸಿದ್ದು ಬಡ ವಿದ್ಯಾರ್ಥಿಗಳಿಗೆ ನಾವು ಮಾಡಿದ ಸಂಪಾದನೆಯ ಒಂದು ಭಾಗವನ್ನು ಸಮಾಜಕ್ಕೆ ವಿನಿಯೋಗಿಸುವ ಕಾರ್ಯ ಇದಾಗಿದೆ.ಮುಂದಿನ ದಿನಗಳಲ್ಲಿ ಇನ್ನಷ್ಟೂ ಸಮಾಜ ಸೇವೆ ಮಾಡುವ ಯೋಗ ದೇವರು ಒದಗಿಸಲಿ ಎನ್ನುವುದೆ ಆಶಯ ” ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಕಿದಿಯೂರು ಉದಯಕುಮಾರ್ ಚಾರಿಟೇಬಲ್ ಟ್ರಸ್ಟ್ ನ‌ ಪ್ರವರ್ತಕರಾದ ಉದಯ್ ಕುಮಾರ್ ಶೆಟ್ಟಿ ಮಾತನಾಡಿ”ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದರೆ ಒಂದು ಹೆಜ್ಜೆ ಮುಂದಡಿ ಇಡಬೇಕು ಹಾಗಾಗಿ ವಿದ್ಯಾರ್ಥಿಗಳು ಇಂದಿನ‌ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ನಂತರ ಹೊಸ ಯಶಸ್ಸಿಗೆ ಒಂದು ಹೆಜ್ಜೆ ಮುಂದೆ ಇಡುತ್ತಾ ಈ ದೇಶಕ್ಕೆ ಒಳ್ಳೆಯ ಪ್ರಜೆಯಾಗಿ ಬಾಳಬೇಕು ಹಾಗೂ ಈ ಪೌಂಡೆಷನ್ ಮಾಡುತ್ತಿರುವ ಈ‌ ಪ್ರತಿಭಾ ಪುರಸ್ಕಾರ ಕಣ್ಣಿಗೆ ಕಾಣದ ದೇವರನ್ನ ವಿದ್ಯಾರ್ಥಿಗಳಲ್ಲಿರುವ ವಿದ್ಯಾದೇವಿ ಸರಸ್ವತಿಯ ಆರಾಧನೆಯಾಗಿದೆ ಎಂದರು.

ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಮಾತನಾಡುತ್ತಾ “ಭಗವಂತನಿಗೆ ಅನೇಕ ರೀತಿಯ ಪೂಜೆಗಳಿವೆ ಅದರಲ್ಲಿ ಯಾವ ಪೂಜೆ ಮಾಡಿದರೆ ಫಲ ಸಿಗುತ್ತೆ ಎಂಬುದು ಮುಖ್ಯವಾಗುತ್ತೆ, ಪ್ರತಿಭಾ ಪುರಸ್ಕಾರ ಅನ್ನುವ ಕಾರ್ಯ ದೇಶಕ್ಕೆ ಸತ್ಪ್ರಜೆಗಳನ್ನು ನೀಡುವ ಕೆಲಸವಾಗಿದ್ದು ಸಮಾಜದಲ್ಲಿ ಒಬ್ಬ ವ್ಯಕ್ತಿ ತನ್ನ ಸಂಪತ್ತನ್ನು ಈ ರೀತಿಯಾಗಿ ವಿನಿಯೋಗಿಸಿದರೆ ಅದುವೆ ದೇವರ ಪ್ರಸಾದ ಎಂದರು.

ಕಾಪು ಪುರಸಭಾ ವ್ಯಾಪ್ತಿಯ ಒಟ್ಟು 100 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಭಾಕರ‌ಪೂಜಾರಿ,ಸುಧಾಮ‌ ಶೆಟ್ಟಿ, ಸಂದೀಪ್ ಶೆಟ್ಟಿ ಕಲ್ಯಾ ಕಾಪು,ನೀಲಾನಂದ ನಾಯ್ಕ್,ಪ್ರಸಾದ್ ಶೆಣೈ, ಮೋಹನ್ ಬ‌ಂಗೇರ,ರಮೇಶ್ ಹೆಗ್ಡೆ .ನೀತಾ ಪ್ರಭು,ಜ್ಯೋತಿ ಯು, ಉಪಸ್ಥಿತರಿದ್ದರು.

ಯತೀಶ್ ಕಾರ್ಯಕ್ರಮ ನಿರೂಪಿಸಿ  ಸ್ವಾಗತಿಸಿ ಸುಕೇಶ ಅಮಿಶ್ ವಂದಿಸಿದರು.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

19 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

20 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

20 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

20 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

20 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago