ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚೀಕಟಪಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು.
ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…