Featured

ಪುಷ್ಪ-2 ಕಾಲ್ತುಳಿತ ಪ್ರಕರಣ : FIR ರದ್ದತಿಗೆ ಹೈಕೋರ್ಟ್‌ ಮೆಟ್ಟಿಲೇರಿದ ಅಲ್ಲು ಅರ್ಜುನ್ – vishwanews24

ಪುಷ್ಪ-2 ಕಾಲ್ತುಳಿತ ಪ್ರಕರಣ : FIR ರದ್ದತಿಗೆ ಹೈಕೋರ್ಟ್‌ ಮೆಟ್ಟಿಲೇರಿದ ಅಲ್ಲು ಅರ್ಜುನ್

ಹೈದರಬಾದ್:‌ಪುಷ್ಪ-2ʼ ಪ್ರಿಮಿಯರ್‌ ಶೋ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದತಿಗೆ ನಟ ಅಲ್ಲು ಅರ್ಜುನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಅಲ್ಲು ಅರ್ಜುನ್‌ ಅವರ ʼಪುಷ್ಪ-2 ಬಾಕ್ಸ್‌ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಕಾಣುತ್ತಿದೆ. ರಿಲೀಸ್‌ ಆದ ವಾರದೊಳಗೆಯೇ ಸಿನಿಮಾ 1000 ಕೋಟಿ ಗಳಿಕೆಯತ್ತ ಮುನ್ನುಗ್ಗುತ್ತಿದೆ. ಪ್ಯಾನ್‌ ಇಂಡಿಯಾದಲ್ಲಿ ಹೊಸ ದಾಖಲೆಗೆ ಮುಂದಾಗುತ್ತಿರುವಾಗಲೇ ʼಪುಷ್ಪ-2ʼ ಚಿತ್ರ ತಂಡದ ಮೇಲಾಗಿರುವ ಎಫ್‌ಐಆರ್‌ ಅಲ್ಲು ಅರ್ಜುನ್‌  ಅವರಿಗೆ ತಲೆ ನೋವಿನ ಸಂಗತಿಯಾಗಿ ಪರಿಣಮಿಸಿದೆ.

ಈ ಘಟನೆ ಸಂಬಂಧ ಪೊಲೀಸರು ಅಲ್ಲು ಅರ್ಜುನ್‌ ಸೇರಿ, ಚಿತ್ರತಂಡ ಹಾಗೂ ಥಿಯೇಟರ್‌ ಮಾಲೀಕ, ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಇತ್ತೀಚೆಗೆ ಸಂಧ್ಯಾ ಥಿಯೇಟರ್ ಮಾಲೀಕ ಎಂ.ಸಂದೀಪ್, ವ್ಯವಸ್ಥಾಪಕ ಎಂ. ನಾಗರಾಜು ಹಾಗೂ ಭದ್ರತಾ ಮುಖ್ಯಸ್ಥ ಗಂಧಕಂ ವಿಜಯ್ ಚಂದರ್ ಅವರನ್ನು ಬಂಧಿಸಲಾಗಿತ್ತು.

ಅಲ್ಲು ಅರ್ಜುನ್‌ ಅವೆ ಮೇಲೂ ಕೇಸ್‌ ದಾಖಲಾಗಿದ್ದು, ಇದೀಗ ಅಲ್ಲು ಅರ್ಜುನ್‌ ಈ ಸಂಬಂಧ ತೆಲಂಗಾಣ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ತನ್ನ ಮೇಲೆ ದಾಖಲಾಗಿರುವ ಎಫ್‌ ಐಆರ್ ರದ್ದುಗೊಳಿಸುವಂತೆ ನಟ ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ನ್ಯಾಯಾಲಯ ಶೀಘ್ರದಲ್ಲೇ ಅರ್ಜಿಯನ್ನು ವಿಚಾರಿಸಲಿದೆ ಎಂದು ವರದಿಯಾಗಿದೆ.

ಘಟನೆಗೆ ವಿಷಾದ ವ್ಯಕ್ತಪಡಿಸಿದ್ದ ಅಲ್ಲು ಅರ್ಜುನ್‌ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago