ಹೈದರಬಾದ್: ‘ಪುಷ್ಪ-2ʼ ಪ್ರಿಮಿಯರ್ ಶೋ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದತಿಗೆ ನಟ ಅಲ್ಲು ಅರ್ಜುನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಲ್ಲು ಅರ್ಜುನ್ ಅವರ ʼಪುಷ್ಪ-2 ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಕಾಣುತ್ತಿದೆ. ರಿಲೀಸ್ ಆದ ವಾರದೊಳಗೆಯೇ ಸಿನಿಮಾ 1000 ಕೋಟಿ ಗಳಿಕೆಯತ್ತ ಮುನ್ನುಗ್ಗುತ್ತಿದೆ. ಪ್ಯಾನ್ ಇಂಡಿಯಾದಲ್ಲಿ ಹೊಸ ದಾಖಲೆಗೆ ಮುಂದಾಗುತ್ತಿರುವಾಗಲೇ ʼಪುಷ್ಪ-2ʼ ಚಿತ್ರ ತಂಡದ ಮೇಲಾಗಿರುವ ಎಫ್‌ಐಆರ್ ಅಲ್ಲು ಅರ್ಜುನ್ ಅವರಿಗೆ ತಲೆ ನೋವಿನ ಸಂಗತಿಯಾಗಿ ಪರಿಣಮಿಸಿದೆ.
ಈ ಘಟನೆ ಸಂಬಂಧ ಪೊಲೀಸರು ಅಲ್ಲು ಅರ್ಜುನ್ ಸೇರಿ, ಚಿತ್ರತಂಡ ಹಾಗೂ ಥಿಯೇಟರ್ ಮಾಲೀಕ, ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಇತ್ತೀಚೆಗೆ ಸಂಧ್ಯಾ ಥಿಯೇಟರ್ ಮಾಲೀಕ ಎಂ.ಸಂದೀಪ್, ವ್ಯವಸ್ಥಾಪಕ ಎಂ. ನಾಗರಾಜು ಹಾಗೂ ಭದ್ರತಾ ಮುಖ್ಯಸ್ಥ ಗಂಧಕಂ ವಿಜಯ್ ಚಂದರ್ ಅವರನ್ನು ಬಂಧಿಸಲಾಗಿತ್ತು.
ಅಲ್ಲು ಅರ್ಜುನ್ ಅವೆ ಮೇಲೂ ಕೇಸ್ ದಾಖಲಾಗಿದ್ದು, ಇದೀಗ ಅಲ್ಲು ಅರ್ಜುನ್ ಈ ಸಂಬಂಧ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ತನ್ನ ಮೇಲೆ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸುವಂತೆ ನಟ ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ನ್ಯಾಯಾಲಯ ಶೀಘ್ರದಲ್ಲೇ ಅರ್ಜಿಯನ್ನು ವಿಚಾರಿಸಲಿದೆ ಎಂದು ವರದಿಯಾಗಿದೆ.
ಘಟನೆಗೆ ವಿಷಾದ ವ್ಯಕ್ತಪಡಿಸಿದ್ದ ಅಲ್ಲು ಅರ್ಜುನ್ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…