ಬೆಂಗಳೂರು: ಉಡುಪಿಯ ಪೇಜಾವರ ಮಠವು ನಗರದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಆಯೋಜಿಸಿದ ವಿಶ್ವೇಶತೀರ್ಥ ಶ್ರೀಪಾದರ 82ನೇ ದ್ವೈತ ವೇದಾಂತ ಸಿಂಹಾಸನ ಪೀಠಾರೋಹಣ ವರ್ಧಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.
‘ಆಧ್ಯಾತ್ಮಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ವಿಶ್ವೇಶತೀರ್ಥರು, ತಮ್ಮ ಪರಿಶುದ್ಧ ಚಾರಿತ್ರ್ಯ, ಅಪಾರ ವಿದ್ವತ್ತಿನಿಂದ ಕೋಟ್ಯಾಂತರ ಭಕ್ತರಿಗೆ ಮಾರ್ಗದರ್ಶನ ಮಾಡಿದ್ದರು. 5 ಬಾರಿ ಉಡುಪಿಯ ಕೃಷ್ಣನ ಪರ್ಯಾಯ ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿ, ದಾಖಲೆ ನಿರ್ಮಿಸಿದ್ದರು. ದೇಶದಾದ್ಯಂತ 80 ಕ್ಕೂ ಹೆಚ್ಚು ಶಾಲಾ–ಕಾಲೇಜುಗಳು, ಅನಾಥಾಶ್ರಮ, ವೇದಪಾಠಶಾಲೆಗಳನ್ನು ನಿರ್ಮಿಸುವ ಮೂಲಕ ಸಮಾಜಸೇವೆಯಲ್ಲೂ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲ, ಇಡೀ ದೇಶದ ಉದ್ದಗಲದಲ್ಲಿ ಅಮಿತವಾದ ಸಂಚಾರ, ಸಕ್ರಿಯ ಚಟುವಟಿಕೆಗಳಿಂದಾಗಿ ಅಪಾರ ಜನಮನ್ನಣೆ ಹೊಂದಿದ್ದರು’ ಎಂದು ಸ್ಮರಿಸಿಕೊಂಡರು.
ಆಶೀರ್ವಚನ ನೀಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು , ‘ವಿಶ್ವೇಶ ತೀರ್ಥರು ಸಮಾಜಸೇವೆಯ ಮೂಲಕವೇ ತಮ್ಮನ್ನು ಕೃಷ್ಣನ ಸೇವೆಯಲ್ಲಿ ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದರು. ರಾಮಜನ್ಮ ಭೂಮಿ,ರಾಮಸೇತು ವಿವಾದ, ಗೋಹತ್ಯೆ ನಿಷೇಧ ಮುಂತಾದ ಸಂದರ್ಭದಲ್ಲಿ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಭಗವಂತನ ಸರ್ಕಾರದಲ್ಲಿ ದೀನದಲಿತರಿಗೆ ಸಲ್ಲಿಸುವ ಸೇವೆಯೇ ತೆರಿಗೆ ಎಂದು ಪರಿಗಣಿಸಲ್ಪಡುತ್ತದೆ. ಅದರ ಮೇಲೆ ಅವರಿಗೆ ನಂಬಿಕೆಯಿತ್ತು’ ಎಂದರು.
‘ಇಳಿ ವಯಸ್ಸಿನಲ್ಲಿಯೂ ದೇಶದಾದ್ಯಂತ ಸಂಚಾರ ಕೈಗೊಳ್ಳುತ್ತಿದ್ದ ಪೇಜಾವರ ಮಠದ ವಿಶ್ವೇಶತೀರ್ಥರು, ಮೇಲುಕೀಳು ಎಂಬ ಭಾವವಿಲ್ಲದೆ ಪ್ರತಿಯೊಬ್ಬರಿಗೂ ಆಧ್ಯಾತ್ಮಿಕ ಜ್ಞಾನವನ್ನು ಪಸರಿಸಲು ಶ್ರಮಿಸಿದರು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ವಿದ್ವಾನ್ ಪ್ರಭಂಜನಾಚಾರ್ಯ, ಉಡುಪಿ ಶಾಸಕ ರಘುಪತಿಭಟ್, ಬಸವನಗುಡಿ ಶಾಸಕ ರವಿಸುಬ್ರಹ್ಮಣ್ಯ ಇದ್ದರು.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…