ಪೂರ್ವ ದೆಹಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಗೌತಮ್ ಗಂಭೀರ್ ಕಣಕ್ಕೆ -Vishwanews24
ನವದೆಹಲಿ, : ಕ್ರಿಕೆಟ್ ಅಂಗಳದಲ್ಲಿ ಹೆಸರು ಮಾಡಿದ್ದ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಚುನಾವಣಾ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದು, ಪೂರ್ವ ದೆಹಲಿ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಲು ಸನ್ನದ್ಧರಾಗಿದ್ದಾರೆ. ಒಂದು ತಿಂಗಳ ಹಿಂದಷ್ಟೆ (ಮಾರ್ಚ್ 22) ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದ ಕ್ರಿಕೆಟ್ ಗೌತಮ್ ಗಂಭೀರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಪೂರ್ವ ದೆಹಲಿ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ಮಂಗಳವಾರ ಭರ್ಜರಿ ರೋಡ್ ಶೋ ನಡೆಸಿದ ಗೌತಮ್ ಗಂಭೀರ್ ನಾಮಪತ್ರ ಸಲ್ಲಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು ನಾನು ರಾಷ್ಟ್ರಕ್ಕಾಗಿ ಏನಾದರೂ ಸೇವೆ ಮಾಡಬೇಕು ಎಂದು ನಿರ್ಧರಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ರಾಜಕೀಯ ರಂಗ ಪ್ರವೇಶಿಸುತ್ತಿದ್ದೇನೆ. ಕಳೆದ 5 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಬದ್ಧವಾಗಿದ್ದೇನೆ ಎಂದರು.
#Delhi: BJP MP candidate from East Delhi, Gautam Gambhir holds roadshow ahead of filling his nomination, says, "I really want to contribute something to the country & whatever our PM has done in the last 5 years, I want to take that legacy forward." pic.twitter.com/eiGz9mcLCd
— ANI (@ANI) April 23, 2019
