ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ ಜೂನ್ 11ರಂದು ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸಲಿದೆ. ಪೆಟ್ರೋಲ್ ಬಂಕ್‌ಗಳ ಮುಂದೆ ನಾಲ್ಕು ಗಂಟೆಗಳ (ಬೆಳಿಗ್ಗೆ 7 ರಿಂದ 11 ರವರೆಗೆ) ಧರಣಿಯನ್ನು ನಡೆಸಲಿದೆ ಎಂದು ಪಕ್ಷ ಹೇಳಿದೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜಿಲ್ಲೆಗಳಲ್ಲಿ ಪೆಟ್ರೋಲ್ ದರ 100 ರೂ. ಗಡಿ ದಾಟಿದೆ. ಮೇ 4 ರಿಂದ ಇದುವರೆಗೂ ಒಟ್ಟು 20 ಬಾರಿ ಪೆಟ್ರೋಲ್ ದರವನ್ನು ಏರಿಕೆ ಮಾಡಲಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ 13 ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 23.72 ರೂ ಮತ್ತು ಡೀಸೆಲ್ ಬೆಲೆ 29.93 ರೂ.ಗೆ ಏರಿದೆ . ಕರೋನಾ ಸಾಂಕ್ರಾಮಿಕವು ಲಕ್ಷಾಂತರ ಜನರ ಜೀವನೋಪಾಯವನ್ನು ಹಾಳುಮಾಡಿದೆ, ಆದರೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸುವಲ್ಲಿ ಕೇಂದ್ರದ ಮೋದಿ ಸರ್ಕಾರವನ್ನು ಕೊರೊನಾವೂ ತಡೆಯಲಿಲ್ಲ” ಎಂದು ಕಾಂಗ್ರೆಸ್ ವಕ್ತಾರರರೂ ದೂರಿದ್ದಾರೆ.
ತೈಲ ಬೆಲೆ ಏರಿಕೆ ಕುರಿತು ಮಾತನಾಡಿರುವ ಕೇಂದ್ರ ಪೆಟ್ರೋಲಿಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, ‘ಜಾಗತಿಕ ಮಟ್ಟದಲ್ಲಿ ಇತ್ತೀಚೆಗೆ ಕಚ್ಚಾತೈಲ ದರ ಹೆಚ್ಚಳವಾಗಿರುವುದೇ ಭಾರತದಲ್ಲಿ ತೈಲ ಬೆಲೆ ಏರಿಕೆಗೆ ಕಾರಣ’ ಎಂದು ಹೇಳಿದ್ದರು್’ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿರುವ ಕುರಿತು ಜಿಎಸ್‌ಟಿ ಮಂಡಳಿ ತೀರ್ಮಾನಿಸಬೇಕು. ಒಂದು ವೇಳೆ ಜಿಎಸ್‌ಟಿ ವ್ಯಾಪ್ತಿಗೆ ಬಂದರೆ ದರಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿವೆ’ ಎಂದು ಸಚಿವರು ತಿಳಿಸಿದ್ದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…