ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ – vishwanews24

Featured, ರಾಜ್ಯ ನ್ಯೂಸ್

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಹಾವೇರಿ: ಪ್ರೀತಿ-ಪ್ರೇಮದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ಘಟನೆ ಶಿಗ್ಗಾವಿ ತಾಲೂಕಿನ ತಡಸದ ಸಮೀಪದ ತಾಯಮ್ಮ ದೇವಸ್ಥಾನ ಹತ್ತಿರ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದ ಪ್ರವೀಣ್ ಭರಮಪ್ಪ ಬೆಟದೂರು(25) ಆತ್ಮಹತ್ಯೆಗೆ ಯತ್ನಿಸಿದ ಯುವಕ.

ಬಿಜೆಪಿಯೊಳಗಿನ ಎಲ್ಲ ಗೊಂದಲಗಳಿಗೆ ನಾಳೆ ತೆರೆ ಬೀಳಲಿದೆ : ಬಿ.ಎಸ್‌.ಯಡಿಯೂರಪ್ಪ – vishwanews24

ಉಡುಪಿಯಲ್ಲಿ ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದ ಪ್ರವೀಣ ಎರಡೂ ದಿನಗಳ ಹಿಂದಷ್ಟೇ ಬೆಳಗಲಿ ಗ್ರಾಮಕ್ಕೆ ಬರುವುದಾಗಿ ಮನೆಯಲ್ಲಿ ತಿಳಿಸಿದ್ದ. ಆದರೆ ತಡಸದ ತಾಯಮ್ಮ ದೇವಸ್ಥಾನ ಹತ್ತಿರ ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ್ದಾನೆ.

ಈ ಘಟನೆಯಲ್ಲಿ ಗಂಭೀರವಾಗಿ ಸುಟ್ಟು ಗಾಯಗೊಂಡಿರುವ‌ ಪ್ರವೀಣ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ಕೂಡಲೇ ಸ್ಥಳೀಯ ಪೊಲೀಸರು ಗಾಯಾಳು ಪ್ರವೀಣನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಸಂವಿಧಾನದ ಬುಡಕ್ಕೆ ಕೈಹಾಕಿದರೆ ನಿಮ್ಮನ್ನು ಸುಟ್ಟು ಬೂದಿ ಮಾಡುವ ದಲಿತರ ದಂಡು ಸಿದ್ದವಿದೆ : ಜಯನ್ ಮಲ್ಪೆ ಎಚ್ಚರಿಕೆ – vishwanews24

Leave a Reply