ಹಾವೇರಿ: ಪ್ರೀತಿ-ಪ್ರೇಮದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ಘಟನೆ ಶಿಗ್ಗಾವಿ ತಾಲೂಕಿನ ತಡಸದ ಸಮೀಪದ ತಾಯಮ್ಮ ದೇವಸ್ಥಾನ ಹತ್ತಿರ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದ ಪ್ರವೀಣ್ ಭರಮಪ್ಪ ಬೆಟದೂರು(25) ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಉಡುಪಿಯಲ್ಲಿ ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದ ಪ್ರವೀಣ ಎರಡೂ ದಿನಗಳ ಹಿಂದಷ್ಟೇ ಬೆಳಗಲಿ ಗ್ರಾಮಕ್ಕೆ ಬರುವುದಾಗಿ ಮನೆಯಲ್ಲಿ ತಿಳಿಸಿದ್ದ. ಆದರೆ ತಡಸದ ತಾಯಮ್ಮ ದೇವಸ್ಥಾನ ಹತ್ತಿರ ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ್ದಾನೆ.
ಈ ಘಟನೆಯಲ್ಲಿ ಗಂಭೀರವಾಗಿ ಸುಟ್ಟು ಗಾಯಗೊಂಡಿರುವ ಪ್ರವೀಣ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ಕೂಡಲೇ ಸ್ಥಳೀಯ ಪೊಲೀಸರು ಗಾಯಾಳು ಪ್ರವೀಣನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…