ಪೆರ್ಣಂಕೀಲ ಶ್ರಿ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ನಿಮಿತ್ತ ನಡೆದ ಗಣಹೋಮ, ಮೃತ್ಯುಂಜಯ ಹೋಮ, ಐಕ್ಯತಾ ಹೋಮ ಮತ್ತು ಕೊಪ್ಪರಿಗೆ ಅಪ್ಪ ಸೇವಾ ಕಾರ್ಯಕ್ರಮ ನಿಮಿತ್ತ ಪೆರ್ಣಂಕಿಲ ಶಂಕರ ಪ್ರತಿಷ್ಠಾನ ವತಿಯಿಂದ ನೀಲಾವರ ಗೋಶಾಲೆಗೆ ಸುಮಾರು 6 ಲಾರಿ ಗೋಗ್ರಾಸವನ್ನು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಮೂಲಕ ಸಮರ್ಪಿಸಲಾಯಿತು.
ಗೋಗ್ರಾಸ ತುಂಬಿದ ವಾಹನಗಳಿಗೆ ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಎಸ್ ಅರ್ ರಂಗಮೂರ್ತಿ ಯವರು ಭಗವಾಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು.
ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪೆರ್ಣಂಕಿಲ ಶ್ರೀಷ ನಾಯಕ್, ಕೊಡಿಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು, ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಶಶಿಧರ ವಾಗ್ಳೆ, ಪೆರ್ಣಂಕಿಲ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ವಿದ್ವಾನ್ ಹರಿದಾಸ್ ಭಟ್ ಪರಿವಾರದ ಕಾರ್ಯಕರ್ತರಾದ ಸುಬ್ರಮಣ್ಯ ವಾಗ್ಳೆ, ವೀರೇಂದ್ರ ಪಾಟ್ಕರ್, ಉಮೇಶ್ ನಾಯಕ್ ನಾಲ್ಕು ಪಾಲು ….. ಮೊದಲಾದವರು ಉಪಸ್ಥಿತರಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…