ಬೆಂಗಳೂರು : ಪೇಂಟ್ಸ್ ಕಾರ್ಖಾನೆಯಲ್ಲಿ ಬಣ್ಣ ಬೆರೆಸುವ ವೇಳೆ ಪೇಂಟ್ ಮಿಕ್ಸರ್ಗೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ.
ಮೃತರನ್ನು 33 ವರ್ಷದ ಶ್ವೇತಾ ಎಂದು ಗುರುತಿಸಲಾಗಿದೆ. ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ ಶ್ವೇತಾ, ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆ ಕೆಲಸ ಮಾಡುತ್ತಿದ್ದರು. ಆದ್ರೆ, ನಿನ್ನೆ ಬಣ್ಣ ಬೆರೆಸುವ ಗ್ರೈಂಡರ್ನಲ್ಲಿ ಜಡೆ ಸಿಲುಕಿದ ಪರಿಣಾಮ ಶ್ವೇತಾ ತಲೆ ಕತ್ತರಿಸಿ ಹೋಗಿದೆ. ಇದರಿಂದ ಮಹಿಳೆ ಸಾವನ್ನಪ್ಪಿದ್ದಾಳೆ.
ಬಣ್ಣ ಗಟ್ಟಿಯಾಗುತ್ತಿದ್ದರಿಂದ ಚೆಕ್ ಮಾಡಲು ಗ್ರೈಂಡರ್ ಒಳಗೆ ಬಗ್ಗಿದಾಗ ಮಹಿಳೆಯ ಜಡೆ ಸಿಲುಕಿದೆ. ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಸಹ ಗ್ರೈಂಡರ್ ಸೌಂಡ್ ಗೆ ಯಾರಿಗೂ ಕೇಳಿಸಿಲ್ಲ. ಮಹಿಳೆ ಗ್ರೈಂಡರ್ಗೆ ಸಿಲುಕಿ ಮೃತಪಟ್ಟ ಬಳಿಕ ಉಳಿದ ಕೆಲಸಗಾರರು ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಗ್ರೈಂಡರ್ ಸ್ಪೀಡ್ಗೆ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ. ಈ ಬಗ್ಗೆ ಪ್ರಕರಣ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…