ಪೇಜಾವರ ಶ್ರೀಗಳಿಗೆ ಕೇಂದ್ರದ ಸಾಧನೆಗಳನ್ನು ಮನವರಿಕೆ ಮಾಡಿಕೊಡುತ್ತೇವೆ : ಸಂಸದೆ ಶೋಭಾ ಕರಂದ್ಲಾಜೆ
ಮಂಗಳೂರು : ಪೇಜಾವರ ಶ್ರೀಗಳು ಸನ್ಯಾಸಿಗಳು ಅವರಿಗೆ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ತಿಳುವಳಿಕೆಯ ಕೊರತೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಪೇಜಾವರ ಶ್ರೀಗಳು ಯಾವ ಆಧಾರದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದರು.
ಮುಂದಿನ ದಿನಗಳಲ್ಲಿ ನಮ್ಮ ಪಕ್ಷದ ಹಿರಿಯರು ಕೇಂದ್ರ ಸರ್ಕಾರ ದೇಶದ ರಕ್ಷಣೆ ವಿಚಾರದಲ್ಲಿ, ವಿದೇಶದಲ್ಲಿ ಗೌರವ ಸಿಗುವ ರೀತಿ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆ ಮಾಡಿಕೊಡಲಿದ್ದಾರೆ ಎಂದರು.
ನರೇಂದ್ರ ಮೋದಿಯವರ ಸರ್ಕಾರ ಹಲವು ಸಾಧನೆಗಳನ್ನು ಮಾಡಿದೆ. ಆದರೆ ನಿರೀಕ್ಷೆಯಷ್ಟು ಆಗಿಲ್ಲ. ಮುಂದಿನ 1 ವರ್ಷದೊಳಗೆ ಬಾಕಿ ಉಳಿದಿರುವ ಕೆಲಸಗಳನ್ನು ಮಾಡಿ ತೋರಿಸಬೇಕು ಎಂದು ಪೇಜಾವರ ಶ್ರೀಗಳು ಹೇಳಿಕೆ ನೀಡಿದ್ದರು. ಶ್ರೀಗಳ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. .
