ಉಡುಪಿ: ಶ್ವಾಸಕೋಶ ಉಸಿರಾಟ ಸಮಸ್ಯೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ(88) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಪೇಜಾವರ ಮಠದಲ್ಲಿ ಶ್ರೀ ಕೃಷ್ಣನಲ್ಲಿ ಲೀನರಾದರು.
ಪೇಜಾವರ ಶ್ರೀಗಳು ಕೀರ್ತಿಶೇಷರಾದ ಘೋಷಣೆಯನ್ನು ಗೋವಿಂದಾ ಹಾಗೂ ಶ್ರೀವಿಶ್ವೇಶತೀರ್ಥರ ಪಾದಾರವಿಂದಕ್ಕೆ ಗೋವಿಂದಾ ಎಂದು ಮೂರು ಬಾರಿ ಹೇಳಿ 9.20ಕ್ಕೆ ಘೋಷಿಸಲಾಯಿತು.
ನ್ಯುಮೋನಿಯಾ (ಶ್ವಾಸಕೋಶ ಉಸಿರಾಟ ಸಮಸ್ಯೆ)ಯಿಂದಾಗಿ ಡಿ.20 ಶುಕ್ರವಾರ ಮುಂಜಾನೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡ ಶ್ರೀಗಳಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡುತಿದ್ದರು. ಕಳೆದ ಎಂಟು ದಿನಗಳ ನಡುವೆ ಆರೋಗ್ಯ ತುಸು ಚೇತರಿಕೆ ಕಂಡಿದ್ದರೂ ಕೃತಕ ಉಸಿರಾಟ ಮೂಲಕ ಗಂಭೀರ ಸ್ಥಿತಿಯಲ್ಲೆ ಚಿಕಿತ್ಸೆ ಮುಂದುವರೆಸಲಾಗಿತ್ತು.
ಆದರೆ, ಶುಕ್ರವಾರ ಮತ್ತು ಶನಿವಾರ ಶ್ರೀಗಳ ದೇಹ ಸ್ಥಿತಿ ಚಿಂತಾಜನಕವಾಗಿತ್ತು. ಶನಿವಾರ ಸಾಯಂಕಾಲ ಮಿದುಳು ಸರಿಯಾಗಿ ಕಾರ್ಯನಿರ್ವಹಿಸದ ಬಗ್ಗೆ ವೈದ್ಯರು ತಿಳಿಸಿದ್ದರು. ಪೇಜಾವರ ಕಿರಿಯ ಶ್ರೀಗಳು ಗುರುಗಳ ಆರೋಗ್ಯ ಸುಧಾರಣೆ ಕಂಡಿಲ್ಲ. ಅವರ ಇಚ್ಛೆಯಂತೆ ಮಠಕ್ಕೆ ಕರೆದುಕೊಂಡು ಹೋಗುವುದಾಗಿ ಶನಿವಾರ ತಿಳಿಸಿದ್ದರು.
ಶ್ರೀಗಳ ಆಸೆಯಂತೆ ಭಾನುವರ ಬೆಳಗ್ಗೆ 6:55 ಗಂಟೆಗೆ ತಜ್ಞ ವೈದ್ಯಕೀಯ ತಂಡ, ಬಿಗು ಪೊಲೀಸ್ ಭದ್ರತೆಯಲ್ಲಿ ಶ್ರೀಗಳನ್ನು ಮಣಿಪಾಲದಿಂದ ಐದು ಕಿಲೋಮೀಟರ್ ದೂರದಲ್ಲಿರುವ ಪೇಜಾವರ ಮಠಕ್ಕೆ ಕರೆತರಲಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…