ಉಡುಪಿ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ವಿಶ್ವೇಶತೀರ್ಥ ಶ್ರೀಗಳಿಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಚಿಕಿತ್ಸೆ ಮುಂದುವರಿದಿದೆ.
ಐಸಿಯುನಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಈ ಮಧ್ಯೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೋನ್ ಕರೆ ಮಾಡಿ, ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಯಾವುದೇ ತುರ್ತು ನೆರವು ಅಗತ್ಯವಿದ್ದಲ್ಲಿ ತಿಳಿಸುವಂತೆ ಪೇಜಾವರಶ್ರೀ ಆಪ್ತಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಶುಕ್ರವಾರ ಕೆಎಂಸಿ ಮಣಿಪಾಲದ ಹಿರಿಯ ವೈದ್ಯೆ ಡಾ. ಸುಧಾ ವಿದ್ಯಾಸಾಗರ್ ದಿನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ, ಉಸಿರಾಟದ ಸಮಸ್ಯೆಯಿಂದ ಸ್ವಾಮೀಜಿ ಕೆಎಂಸಿಗೆ ಬೆಳಗ್ಗೆ ದಾಖಲಾಗಿದ್ದರು. ಈಗ ಕೊಂಚ ಚೇತರಿಸಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾಗುವಾಗ ಬಹಳ ಸಮಸ್ಯೆಯಿತ್ತು ಎಂದು ಹೇಳಿದರು. ಶ್ರೀಗಳಿಗೆ ವೆಂಟಿಲೇಟರ್ ಅಳವಡಿಸಿದ್ದೇವೆ, ಚೇತರಿಸಿಕೊಳ್ಳಲು ಮದ್ದುಗಳನ್ನು ಹಾಕಿರುವುದರಿಂದ ಅಮಲಿನಲ್ಲಿದ್ದಾರೆ ಎಂದು ತಿಳಿಸಿದ್ದರು.
ಪೇಜಾವರ ಶ್ರೀಗಳಿಗೆ ಕೆಎಂಸಿಯ ಆರು ತಜ್ಞ ವೈದ್ಯರಿಂದ ಚಿಕಿತ್ಸೆ ಸಿಗುತ್ತಿದೆ. ಡಾ. ಸುಧಾ ವಿದ್ಯಾಸಾಗರ್ ವೈದ್ಯರ ತಂಡದ ನೇತೃತ್ವ ವಹಿಸಿದ್ದು, ರವಿರಾಜ್ ಆಚಾರ್ಯ, ಡಾ. ಶ್ವೇತಪ್ರಿಯ, ಡಾ. ಮಂಜುನಾಥ ಹಂದೆ, ಡಾ. ಪದ್ಮಕುಮಾರ್, ಡಾ. ವಿಶಾಲ್ ಶಾನುಭೋಗ್ ಅವರು 24 ಗಂಟೆ ನಿಗಾ ವಹಿಸಲಿದ್ದಾರೆ. ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಶ್ರೀಗಳ ಚಿಕಿತ್ಸೆಯ ಸಂಪೂರ್ಣ ಮೇಲ್ವಿಚಾರಣೆ ಜವಾಬ್ದಾರಿ ಹೊತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…