Featured

ಪೇಜಾವರ ಶ್ರೀ ಪದ್ಮವಿಭೂಷಣ ಪ್ರಶಸ್ತಿಗೆ ನ. 11 ರಂದು ಸ್ವಾಗತ ಸಮಾರಂಭ – Vishwanews24

ಪೇಜಾವರ ಶ್ರೀ ಪದ್ಮವಿಭೂಷಣ ಪ್ರಶಸ್ತಿಗೆ ನ. 11 ರಂದು ಸ್ವಾಗತ ಸಮಾರಂಭ – Vishwanews24

ಉಡುಪಿ: ಭಾರತ ಸರ್ಕಾರದಿಂದ ಕೀರ್ತಿ ಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಕೊಡಮಾಡಿದ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ನವಂಬರ್ 11 ಗುರುವಾರದಂದು ಸಂಜೆ ಉಡುಪಿಯಲ್ಲಿ ಭಕ್ತಿ ಗೌರವಪೂರ್ವಕವಾಗಿ ಸ್ವಾಗತಿಸಲಾಗುವುದು .

ಅಂದು ಸಂಜೆ 4.30 ಕ್ಕೆ ಉಡುಪಿ ಸಂಸ್ಕೃತ ಕಾಲೇಜಿನಿಂದ ಅಲಂಕೃತ ವಾಹನದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಹಾಗೂ ಪದ್ಮವಿಭೂಷಣ ಪ್ರಶಸ್ತಿಯನ್ನು ಇಟ್ಟು ಸಾಂಪ್ರದಾಯಿಕ ಬಿರುದಾವಳಿ ಚಂಡೆ ವಾದ್ಯಮೇಳಗಳ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಶ್ರೀ ಕೃಷ್ಣ ಮಠಕ್ಕೆ ತರಲಾಗುವುದು . ಶ್ರೀ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಕೃಷ್ಣ ದೇವರಿಗೆ ಅರ್ಪಿಸಿ , ಅಷ್ಟ ಮಠಾಧೀಶರುಗಳಿಗೆ ಅದನ್ನು ಪ್ರದರ್ಶಿಸಿ ಬಳಿಕ ಪುನಃ ಅದೇ ವಾಹನದಲ್ಲಿ ಶ್ರೀ ಪೇಜಾವರ ಮಠಕ್ಕೆ ತರಲಾಗುವುದು.‌ ಅಲ್ಲಿ ಗುರುಗಳ ಪೀಠದಲ್ಲಿಟ್ಟು ಅರ್ಪಿಸಿದ ಬಳಿಕ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹಾಗೂ ವಿವಿಧ ಮಠಾಧೀಶರುಗಳು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಸಭೆ ಪೇಜಾವರ ಮಠದ ಮುಂಭಾಗದಲ್ಲಿ ನಡೆಯಲಿದೆ .

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…

12 hours ago

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

18 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

19 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

20 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

20 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

20 hours ago