ಉಡುಪಿ: ಭಾರತ ಸರ್ಕಾರದಿಂದ ಕೀರ್ತಿ ಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಕೊಡಮಾಡಿದ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ನವಂಬರ್ 11 ಗುರುವಾರದಂದು ಸಂಜೆ ಉಡುಪಿಯಲ್ಲಿ ಭಕ್ತಿ ಗೌರವಪೂರ್ವಕವಾಗಿ ಸ್ವಾಗತಿಸಲಾಗುವುದು .
ಅಂದು ಸಂಜೆ 4.30 ಕ್ಕೆ ಉಡುಪಿ ಸಂಸ್ಕೃತ ಕಾಲೇಜಿನಿಂದ ಅಲಂಕೃತ ವಾಹನದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಹಾಗೂ ಪದ್ಮವಿಭೂಷಣ ಪ್ರಶಸ್ತಿಯನ್ನು ಇಟ್ಟು ಸಾಂಪ್ರದಾಯಿಕ ಬಿರುದಾವಳಿ ಚಂಡೆ ವಾದ್ಯಮೇಳಗಳ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಶ್ರೀ ಕೃಷ್ಣ ಮಠಕ್ಕೆ ತರಲಾಗುವುದು . ಶ್ರೀ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಕೃಷ್ಣ ದೇವರಿಗೆ ಅರ್ಪಿಸಿ , ಅಷ್ಟ ಮಠಾಧೀಶರುಗಳಿಗೆ ಅದನ್ನು ಪ್ರದರ್ಶಿಸಿ ಬಳಿಕ ಪುನಃ ಅದೇ ವಾಹನದಲ್ಲಿ ಶ್ರೀ ಪೇಜಾವರ ಮಠಕ್ಕೆ ತರಲಾಗುವುದು. ಅಲ್ಲಿ ಗುರುಗಳ ಪೀಠದಲ್ಲಿಟ್ಟು ಅರ್ಪಿಸಿದ ಬಳಿಕ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹಾಗೂ ವಿವಿಧ ಮಠಾಧೀಶರುಗಳು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಸಭೆ ಪೇಜಾವರ ಮಠದ ಮುಂಭಾಗದಲ್ಲಿ ನಡೆಯಲಿದೆ .
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…