ನವದೆಹಲಿ : ನಿಯಮಗಳನ್ನು ನಿರಂತರ ಉಲ್ಲಂಘನೆ ಮಾಡಿದ್ದಕ್ಕೆ ಏಪ್ರಿಲ್ 24 ರಿಂದ ಜಾರಿಗೆ ಬರುವಂತೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಿದ್ದ ಬ್ಯಾಂಕಿಂಗ್ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ರದ್ದುಗೊಳಿಸಿದೆ.
ಬ್ಯಾಂಕಿನ ವ್ಯವಹಾರಗಳು ಹಾನಿಕಾರಕ ರೀತಿಯಲ್ಲಿ ನಡೆದಿದ್ದು, ಇದು ಠೇವಣಿದಾರರು ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಬ್ಯಾಂಕ್ ಪದೇ ಪದೇ ಮಾರ್ಗಸೂಚಿಗಳನ್ನು ಅನುಸರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿ ಆರ್‌ಬಿಐ ಬ್ಯಾಂಕಿನ ಪರವಾನಗಿಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ.
ಈ ಕ್ರಮವು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಮಾತ್ರ ಅನ್ವಯಿಸುತ್ತದೆ. ಪೇಟಿಎಂ ಆಪ್ (Paytm App), ಪೇಟಿಎಂ ಯುಪಿಐ (UPI), ಮತ್ತು ಇತರ ಮರ್ಚೆಂಟ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಇದನ್ನೂ ಓದಿ:
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಆರ್‌ಬಿಐ ಅಡಿಯಲ್ಲಿ ಬರುವ ವಿಶೇಷ ಬ್ಯಾಂಕ್ ಆಗಿತ್ತು.ಇದು ಸಾಮಾನ್ಯ ಬ್ಯಾಂಕುಗಳಿಗಿಂತ ಸ್ವಲ್ಪ ಭಿನ್ನವಾಗಿ ಕಾರ್ಯನಿರ್ವಹಿಸುತ್ತಿತ್ತು.ಇವು ಗ್ರಾಹಕರಿಂದ ಠೇವಣಿ ಸ್ವೀಕರಿಸಲು ಅನುಮತಿ ಇತ್ತು. ಆದರೆ ಸಾಲ ನೀಡಲು ಅಥವಾ ಕ್ರೆಡಿಟ್ ಕಾರ್ಡ್ ನೀಡಲು ಇವುಗಳಿಗೆ ಅನುಮತಿ ಇರುವುದಿಲ್ಲ.
ಈ ಬ್ಯಾಂಕ್ ಖಾತೆಯಲ್ಲಿ ಒಬ್ಬ ಗ್ರಾಹಕರು ಗರಿಷ್ಠ 2 ಲಕ್ಷದವರೆಗೆ ಮಾತ್ರ ಹಣವನ್ನು ಇಟ್ಟುಕೊಳ್ಳಲು ಅವಕಾಶವಿತ್ತು. ಇದು ಉಳಿತಾಯ ಖಾತೆ , ಡೆಬಿಟ್ ಕಾರ್ಡ್, ಆನ್‌ಲೈನ್ ಬ್ಯಾಂಕಿಂಗ್ ಮತ್ತು ವ್ಯಾಲೆಟ್ ಸೇವೆಗಳನ್ನು ನೀಡುತ್ತಿತ್ತು. ಇದಕ್ಕೆ ಸಾಮಾನ್ಯ ಬ್ಯಾಂಕುಗಳಂತೆ ಹೆಚ್ಚಿನ ಭೌತಿಕ ಶಾಖೆಗಳಿರಲಿಲ್ಲ. ಮೊಬೈಲ್ ಆಪ್ ಮೂಲಕವೇ ಎಲ್ಲ ವ್ಯವಹಾರಗಳು ನಡೆಯುತ್ತಿದ್ದವು.
ಇದನ್ನೂ ಓದಿ:
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…