ಮಂಗಳೂರು : ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ” ಹೀಗೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಬಹಿರಂಗ ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು.
ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು ಇದರಿಂದ ನೀರಿನ ಪೈಪ್ ಒಡೆದು ಸಮಸ್ಯೆ ಸೃಷ್ಟಿಯಾಗಿದೆ ಎನ್ನುವುದನ್ನು ಗಮನಕ್ಕೆ ತಂದರು.
ಈ ವೇಳೆ ಸ್ಥಳದಲ್ಲೇ ಇದ್ದ ಕಂಪೆನಿ ಅಧಿಕಾರಿಗಳನ್ನು ಕರೆದ ಶಾಸಕರು, “ಬೇಕಾಬಿಟ್ಟಿ ಕಾಮಗಾರಿ ಮಾಡಬೇಡಿ, ಏನೇ ಮಾಡೋದಿದ್ರೂ ಸ್ಥಳೀಯ ಕಾರ್ಪೋರೇಟರ್ ಹಾಗೂ ಸಾರ್ವಜನಿಕರ ಗಮನಕ್ಕೆ ತಂದು ಬಳಿಕ ಮಾಡಿ. ನಿಮ್ಮಿಂದಾಗಿ ನಗರ ಪಾಲಿಕೆಯ ಎಲ್ಲಾ ಕಡೆಗಳಲ್ಲಿ ಸಮಸ್ಯೆಯಾಗುತ್ತಿದೆ. 10-15 ದಿನಗಳು ನೀರಿಲ್ಲದಿದ್ದರೆ ಜನರು ಏನು ಮಾಡಬೇಕು? ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ” ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಕಂಪೆನಿ ಅಧಿಕಾರಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…