Featured

ಪೊಲೀಸರಿಂದ ದೌರ್ಜನ್ಯ, ರಾಜಕೀಯ ಕಿರುಕುಳದ ಆರೋಪ : ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಮಹೇಶ್ ಶೆಟ್ಟಿ ತಿಮರೋಡಿ – vishwanews24

ಪೊಲೀಸರಿಂದ ದೌರ್ಜನ್ಯ, ರಾಜಕೀಯ ಕಿರುಕುಳದ ಆರೋಪ :  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಮಹೇಶ್ ಶೆಟ್ಟಿ ತಿಮರೋಡಿ

ಮಂಗಳೂರು: ಹೋರಾಟಗಾರ, ಹಿಂದುತ್ವದ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (NHRC) ದೂರು ನೀಡಿದ್ದು, ಪೊಲೀಸರು ತಮ್ಮ ಮೇಲೆ ತೀವ್ರ ದೌರ್ಜನ್ಯ ಎಸಗುತ್ತಿದ್ದಾರೆ ಮತ್ತು ರಾಜಕೀಯ ಕಾರಣಗಳಿಗಾಗಿ ತಮ್ಮನ್ನು ಗುರಿಯಾಗಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಮ್ಮ ಮತ್ತು ತಮ್ಮ ಬೆಂಬಲಿಗರ ಮೇಲೆ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಅವರು ಕೋರಿದ್ದು, ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಸುಳ್ಳು ಪ್ರಕರಣಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಕಳೆದ 13 ವರ್ಷಗಳಿಂದ ಹೋರಾಡುತ್ತಿರುವುದೇ ಈ ಕಿರುಕುಳಕ್ಕೆ ಕಾರಣ ಎಂದು ತಿಮರೋಡಿ ಹೇಳಿದ್ದಾರೆ. ಇತ್ತೀಚೆಗೆ ಧರ್ಮಸ್ಥಳದ ದೇವಸ್ಥಾನವೊಂದನ್ನು ಖಾಸಗಿ ವ್ಯಕ್ತಿಗಳಿಗೆ ವರ್ಗಾಯಿಸಿ, ಅದನ್ನು ಜೈನ ಸಂಸ್ಥೆ ಎಂದು ಹೇಳುತ್ತಿರುವುದನ್ನು ತಾವು ಪ್ರಶ್ನಿಸಿದ್ದೇ ಈಗಿನ ಸಮಸ್ಯೆಗಳಿಗೆ ಮೂಲ ಕಾರಣ. ಬಿಜೆಪಿ ನಾಯಕರ ಬೆಂಬಲದಿಂದ ಹೀಗೆ ಮಾಡಲಾಗುತ್ತಿದೆ ಎಂದು ತಾವು ನೀಡಿದ ಹೇಳಿಕೆಯನ್ನೇ ಮುಂದಿಟ್ಟುಕೊಂಡು, ತಮ್ಮ ಮೇಲೆ ಪ್ರಕರಣಗಳ ಸರಮಾಲೆ ಆರಂಭವಾಯಿತು ಎಂದು ಅವರು ವಿವರಿಸಿದ್ದಾರೆ.

ಆಗಸ್ಟ್ 16, 2025 ರಂದು ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ತಮ್ಮ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಯಿತು. ವಿಚಾರಣೆಗೆ ಹಾಜರಾಗಲು 15 ದಿನಗಳ ಕಾಲಾವಕಾಶ ಕೇಳಿದ್ದರೂ, ಉತ್ತರ ನೀಡದೆ ಆಗಸ್ಟ್ 21 ರಂದು ಏಳು ಪೊಲೀಸ್ ಜೀಪ್‌ಗಳು ಮತ್ತು ಎರಡು ವ್ಯಾನ್‌ಗಳಲ್ಲಿ ಹಿರಿಯ ಅಧಿಕಾರಿಗಳು ತಮ್ಮ ಮನೆಗೆ ಬಂದಿದ್ದರು. ಇದು ಸಾರ್ವಜನಿಕವಾಗಿ ತಮಗೆ ಅವಮಾನ ಮಾಡುವ ಉದ್ದೇಶದಿಂದ ನಡೆಸಿದ ದಾಳಿಯಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ತಾವು ಉಜಿರೆಯಿಂದ ಬ್ರಹ್ಮಾವರಕ್ಕೆ ಹೋಗುವಾಗ, ತಮ್ಮ ಮೂವರು ಯುವ ಬೆಂಬಲಿಗರಿದ್ದ ವಾಹನ ಎಎಸ್‌ಪಿ ಅವರ ವಾಹನಕ್ಕೆ ಆಕಸ್ಮಿಕವಾಗಿ ತಗುಲಿದೆ. ಆದರೆ ಪೊಲೀಸರು ಇದನ್ನೇ ದೊಡ್ಡದು ಮಾಡಿ, ಆ ಯುವಕರ ಮೇಲೆ ಕೊಲೆ ಯತ್ನದ (ಐಪಿಸಿ 307) ಕೇಸ್ ಹಾಕಲು ಒತ್ತಡ ಹೇರಿದರು. ಅಷ್ಟೇ ಅಲ್ಲದೆ, ತಮ್ಮ ರಕ್ತದೊತ್ತಡ ಹೆಚ್ಚಾಗಿದ್ದರೂ ವೈದ್ಯರ ಸಲಹೆಯನ್ನು ನಿರ್ಲಕ್ಷಿಸಲಾಯಿತು ಮತ್ತು ರಾಜಕೀಯ ಪ್ರೇರಿತ ಹಳೆಯ ಕೇಸುಗಳನ್ನು ಮುಂದಿಟ್ಟು ಜಾಮೀನು ಕೂಡ ನಿರಾಕರಿಸಲಾಯಿತು ಎಂದು ಅವರು ದೂರಿದ್ದಾರೆ.

ತಮ್ಮ ಮನೆಯ ಬಳಿ ಸೇರಿದ್ದ ಗ್ರಾಮಸ್ಥರು ಮತ್ತು ಬೆಂಬಲಿಗರ ಮೇಲೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಚ್ಚರಿಯೆಂದರೆ, ತಾವು ಜೈಲಿನಲ್ಲಿದ್ದಾಗಲೇ ತಮ್ಮ ಹೆಸರನ್ನು ಮತ್ತೊಂದು ಪ್ರಕರಣದಲ್ಲಿ ಸೇರಿಸಲಾಗಿದೆ. ಇದು ಪೊಲೀಸರೇ ಕೇಸುಗಳನ್ನು ಸೃಷ್ಟಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ. “ಮಹೇಶ್ ಶೆಟ್ಟಿಯನ್ನು ಬಂಧಿಸಿ, ಜಾಮೀನು ಸಿಗದಂತೆ ನೋಡಿಕೊಳ್ಳಲು ಮೇಲಿನಿಂದ ಒತ್ತಡವಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿಕೊಂಡಿದ್ದು, ಇದು ರಾಜಕೀಯ ಷಡ್ಯಂತ್ರವನ್ನು ಬಯಲು ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ತಮ್ಮ ಬೆಂಬಲಿಗರು ಹೆಚ್ಚಾಗಿ ದಿನಗೂಲಿ ಕಾರ್ಮಿಕರಾಗಿದ್ದು, ಅವರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಕೋರ್ಟಿಗೆ ಅಲೆದಾಡುವಂತೆ ಮಾಡಿ ಅವರಿಗೆ ತೊಂದರೆ ಕೊಡಲಾಗುತ್ತಿದೆ. ತಮ್ಮ ಮೇಲೆ ಕೋಮು ಗಲಭೆಯ ಸುಳ್ಳು ಆರೋಪ ಹೊರಿಸಿ, ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಗಡಿಪಾರು ಮಾಡಲು ಸಹ ಪ್ರಯತ್ನ ನಡೆಯುತ್ತಿದೆ ಎಂದು ತಿಮರೋಡಿ ಆರೋಪಿಸಿದ್ದಾರೆ.

ಈ ಎಲ್ಲಾ ಕಾರಣಗಳಿಂದ, ತಮ್ಮ ಮೇಲಿನ ಪ್ರಕರಣಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು, ಸುಳ್ಳು ಕೇಸುಗಳನ್ನು ಹಿಂಪಡೆಯಲು ಶಿಫಾರಸು ಮಾಡಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಯೋಗವನ್ನು ಕೋರಿದ್ದಾರೆ. ತಮಗೆ, ತಮ್ಮ ಕುಟುಂಬಕ್ಕೆ ಮತ್ತು ಬೆಂಬಲಿಗರಿಗೆ ಸಂಪೂರ್ಣ ರಕ್ಷಣೆ ನೀಡುವಂತೆಯೂ ಮನವಿ ಮಾಡಿದ್ದಾರೆ.

“ಇದು ಕೇವಲ ನನ್ನೊಬ್ಬನ ಹೋರಾಟವಲ್ಲ, ಇದು ‘ಸೌಜನ್ಯಳಿಗೆ ನ್ಯಾಯ ಸಿಗಲಿ’ ಎಂದು ಘೋಷಣೆ ಕೂಗಿದ ನೂರಾರು ಜನರ ಹೋರಾಟ. ನನಗೇ ಈ ರೀತಿಯಾದರೆ, ಬಡವರ ಮತ್ತು ಧ್ವನಿ ಇಲ್ಲದವರ ಗತಿ ಏನು? ಆಯೋಗ ಈಗಲೇ ಕ್ರಮ ಕೈಗೊಳ್ಳದಿದ್ದರೆ, ಸಂವಿಧಾನದ ಹಕ್ಕುಗಳಿಗೆ ಬೆಲೆ ಇಲ್ಲ ಎಂಬ ಸಂದೇಶ ರವಾನೆಯಾಗುತ್ತದೆ,” ಎಂದು ತಿಮರೋಡಿ ತಮ್ಮ ಪತ್ರದಲ್ಲಿ ನೋವು ತೋಡಿಕೊಂಡಿದ್ದಾರೆ.

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago