Featured

ಪೊಲೀಸ್ ಅಧಿಕಾರಿ ‌ಹಾಗೂ ಸಿಬ್ಬಂದಿಗಳು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ : ಡಾ.‌ಜಿ.ಪರಮೇಶ್ವರ್‌  – vishwanews24

ಪೊಲೀಸ್ ಅಧಿಕಾರಿಗಳು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ : ಡಾ.‌ಜಿ.ಪರಮೇಶ್ವರ್‌

ದಾವಣಗೆರೆ: ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದು ವೇಳೆ ಬರೆಸಿದ್ದರೆ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್‌ ಅವರು ಸ್ಪಷ್ಟಪಡಿಸಿದ್ದಾರೆ.

ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತ ಮೂಲಕ ಸಚಿವ ಡಾ.ಜಿ.ಪರಮೇಶ್ವರ್​ ಅವರು ಈ ಉತ್ತರ ನೀಡಿದ್ದಾರೆ.

ರಾಜ್ಯದ ಪೊಲೀಸ್​ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ‌ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೇಳಿದರು.

ಹಾಗಿದ್ದಲ್ಲಿ, ಸ್ವಂತ ವಾಹನಗಳ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಕೆಲ ಪೊಲೀಸ್​ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರವು ತೆಗೆದುಕೊಂಡಿರುವ ಕ್ರಮಗಳೇನು? ಎಂಬ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಗೃಹ ಸಚಿವ ಡಾ.ಜಿ‌.ಪರಮೇಶ್ವರ್ ಅವರು, ತಮ್ಮ ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಯಿಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಸ್ವಂತ ವಾಹನದ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೆ ಅವರ ವಿರುದ್ಧ 2022 ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…

4 hours ago

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

10 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

10 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

11 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

11 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

12 hours ago