Featured

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ದಯಾನಂದ ನೇಮಕ  – Vishwanews24

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ದಯಾನಂದ ನೇಮಕ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ  ಅವರನ್ನು ನೇಮಕ ಮಾಡಲಾಗಿದೆ. ಈಗಿದ್ದ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ  ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ರಾಜ್ಯ ಸರ್ಕಾರ ಆದೇಶಿಸಿದೆ. ಇನ್ನು ಬೆಂಗಳೂರು ನಗರದ ‘ವಿಶೇಷ ಕಮಿಷನರ್’ (ಸಂಚಾರ) ಎಂಎ ಸಲೀಂ ಅವರನ್ನು ಸಿಐಡಿ ಡಿಜಿಯಾಗಿ ವರ್ಗಾವಣೆ ಮಾಡಲಾಗಿದೆ.

ವರ್ಷದ ಹಿಂದೆಯಷ್ಟೇ (2022) ಪೊಲೀಸ್‌ ಆಯುಕ್ತರಾಗಿ ನೇಮಕಗೊಂಡಿದ್ದ ಪ್ರತಾಪ್ ರೆಡ್ಡಿ ಅವರಿಗೆ ಈ ವರ್ಷದ(2023) ಆರಂಭದಲ್ಲಿ ಪೊಲೀಸ್‌ ಮಹಾನಿರ್ದೇಶಕರ ಹುದ್ದೆಗೆ ಬಡ್ತಿ ನೀಡಿ ಅಲ್ಲಿಯೇ ಮುಂದುವರೆಸಲಾಗಿತ್ತು. ಆದ್ರೆ, ಇದೀಗ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಇವರ ಸ್ಥಾನಕ್ಕೆ 1994 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಬಿ ದಯಾನಂದ್ ಅವರನ್ನು ನೇಮಕ ಮಾಡಲಾಗಿದೆ.

ದಯಾನಂದ ಈ ಹಿಂದೆ ಬೆಂಗಳೂರಿನಲ್ಲಿ ಹೆಚ್ಚುವರಿ ಪೊಲೀಸ್ ಕಮಿಷನರ್ (ಸಂಚಾರ) ಆಗಿ ಸೇವೆ ಸಲ್ಲಿಸಿದ್ದರು. ಸದ್ಯ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ಕೆಲಸ ನಿರ್ವಹಿಸುತ್ತಿರುವ ಬಿ.ದಯಾನಂದ ಹಾವೇರಿ  ಜಿಲ್ಲೆಯ ರಾಣೆಬೆನ್ನೂರು ಮೂಲದವರಾಗಿದ್ದಾರೆ.

ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ತಮ್ಮ ತವರು ಜಿಲ್ಲೆ ದಯಾನಂದ ಅವರನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡಿದ್ದವು. ಬಿ.ದಯಾನಂದ್  ಹೆಸರು ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆಗೆ ಬಹುತೇಕ ಫೈನಲ್ ಆಗಿತ್ತು. ಹೀಗಾಗಿ ಕನ್ನಡಿದ ಐಪಿಎಸ್ ಅಧಿಕಾರಿಗೆ ಈ ಬಾರಿ ಬೆಂಗಳೂರು ಪೊಲೀಸ್ ಕಮಿಷನರ್  ಹುದ್ದೆ ಒಲಿಯುವುದು ಪಕ್ಕಾ ಎನ್ನಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಪ್ರತಾಪ್ ರೆಡ್ಡಿ ಅವರನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕನ್ನಡಿಗ ದಯಾನಂದ ಅವರಿಗೆ ಬೆಂಗಳೂರು ಕಮಿಷನರ್ ಹುದ್ದೆ ಒಲಿದುಬಂದಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago