Featured

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದ ಪೊಲೀಸ್ ಕಾನ್ಸ್‌ಸ್ಟೇಬಲ್ ಪರೀಕ್ಷೆಗೆ ಸರ್ಕಾರ ಸಜ್ಜಾಗಿದೆ. ಆಗಸ್ಟ್ 2ರಂದು ರಾಜ್ಯದಲ್ಲಿ ಪೊಲೀಸ್ ಪೇದೆ ಲಿಖಿತ ಪರೀಕ್ಷೆ ನಡೆಯಲಿದೆ. ಈಗಾಗಲೇ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಯುವ ಸಮೂಹದ ಪ್ರತಿಭಟನೆಯಿಂದ ದೇಶದಲ್ಲೇ ಶಿಕ್ಷಣ ಹಾಗೂ ಪರೀಕ್ಷಾ ಸುಧಾರಣೆಗಳಿಗೆ ಒತ್ತಾಯ ಹೆಚ್ಚಾಗುತ್ತಿದೆ.

ಇದರ ಬೆನ್ನಲ್ಲೇ ರಾಜ್ಯದ ಕಾನ್ಸ್‌ಸ್ಟೇಬಲ್ ಪರೀಕ್ಷೆಯನ್ನು ಸೂಸೂತ್ರವಾಗಿ ನಡೆಸಲು ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆ ಮುತುವರ್ಜಿ ವಹಿಸಿದ್ದಾರೆ. ಇದೇ ವೇಳೆ ಎದ್ದಿರುವ ಕೆಲ ಗೊಂದಲಗಳಿಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಪೈಕಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪೊಲೀಸ್ ಕಾನ್ಸ್‌ಸ್ಟೇಬಲ್ ಲಿಖಿತ ಪರೀಕ್ಷೆಯಲ್ಲಿ ಹಿಜಾಬ್ ಹಾಕಲು ಅವಕಾಶವಿಲ್ಲ. ಧಾರ್ಮಿಕ ಉಡುಪುಗಳ ಬಗ್ಗೆ ಗೊಂದಲ ಆಗದಂತೆ ಮೊದಲೇ ನೋಡಿಕೊಳ್ಳಲಾಗುವುದು ಎಂದು ಪ್ರಿಯಾಂಕಾ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಪರೀಕ್ಷೆ ವೇಳೆ ಯಾವ ಉಡುಪು ಹಾಕಬಹುದು..ಯಾವುದು ಹಾಕಬಾರದು ಅಂತ ಪ್ರವೇಶ ಪತ್ರದಲ್ಲಿ ಹಾಕಿರುತ್ತೇವೆ. ಹೀಗಾಗಿ ಪರೀಕ್ಷಾ ಕೊಠಡಿ ಬಳಿ ಯಾವುದೇ ಗೊಂದಲಕ್ಕೆ ಅವಕಾಶವಿರುವುದಿಲ್ಲ ಎಂದು ಪ್ರಿಯಾಂಕ ಖರ್ಗೆ ಸ್ಪಷ್ಟಪಡಿಸಿದ್ದಾರೆ.

24 ಗಂಟೆ ಮುಂಚೆ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸೇಶನ್ ಮಾಡಲಾಗುತ್ತದೆ. ಪರೀಕ್ಷಾ ರೂಮ್ ನಲ್ಲಿ ನಿಯೋಜಿತ ಸಿಬ್ಬಂದಿ ಸಹ ಮೊಬೈಲ್ ಬಳಕೆ ಮಾಡುವಂತಿಲ್ಲ. ಪರೀಕ್ಷೆ ಹಿನ್ನೆಲೆಯಲ್ಲಿ ಖಾಸಗಿ ತರಬೇತಿ ಸೆಂಟರ್ ಮೇಲೂ ನಿಗಾ ವಹಿಸುತ್ತೇವೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಜನಿವಾರ, ಶಿವದಾರ, ಉಡದಾರ, ಮಾಂಗಲ್ಯ ಸರ, ಮುಗುತಿ, ಕುಂಕುಮ, ಉಂಗುರ, ತಾಯತಾ ಹಾಕುವುದು ಸೇರಿದಂತೆ ಎಲ್ಲಾ ವಸ್ತುಗಳ ಬಳಕೆ ಬಗ್ಗೆ ಮೊದಲೇ ತಿಳಿಸಲಾಗುವುದು. ಈ ಮೂಲಕ ಯಾವುದೇ ರೀತಿಯಲ್ಲಿ ಕೊನೆಕ್ಷಣದ ಗೊಂದಲಕ್ಕೆ ಅವಕಾಶ ಇಲ್ಲದಂತೆ ನೋಡಿಕೊಳ್ಳಲಾಗುವುದು. ಎರಡುವರೆ ಗಂಟೆ ಮುಂಚೆ ಬಂದು ಇವುಗಳನ್ನು ‌ಚೆಕ್ ಮಾಡಿಸಲು ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago