ಅಲಿಘಡ: ಮನೆಯಲ್ಲಿ ಪ್ರತಿ ದಿನ ಆಸ್ತಿಗಾಗಿ ಜಗಳ. ಹೀಗಾಗಿ ಪೊಲೀಸ್ ಠಾಣೆಗೆ ತಾಯಿ ಹಾಗೂ ಮಗ ಆಗಮಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಪೊಲೀಸ್ ಠಾಣೆಯಿಂದ ಹೊರಬದ ತಾಯಿ ಮಗ ವಾಗ್ವಾದ ನಡೆಸಿದ್ದಾರೆ. ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚುವ ಬೆದರಿಕೆ ಹಾಕಿದ ತಾಯಿಗೆ ಮನಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಬಳಿಕ ಈ ವಿಡಿಯೋವನ್ನು ರೆಕಾರ್ಡ್ ಮಾಡಿದ ಅತ್ಯಂತ ಹೇಯ ಘಟನೆ ಉತ್ತರ ಪ್ರದೇಶದ ಅಲಿಘಡದಲ್ಲಿ ನಡದಿದೆ.
ತಾಯಿ ಹಾಗೂ ಮಗನ ನಡುವೆ ಆಸ್ತಿಗಾಗಿ ಜಗಳ ಶುರುವಾಗಿದೆ. ಈ ಕುರಿತು ಕುಟುಂಬಸ್ಥರು ಮಧ್ಯಪ್ರವೇಶಿದರೂ ಮಗ ಆಸ್ತಿಗೆ ಪಟ್ಟು ಹಿಡಿದಿದ್ದಾನೆ. ತಾಯಿ ಆಸ್ತಿ ಮಗನಿಗೆ ನೀಡಲು ನಿರಾಕರಿಸಿದ್ದಳು. ಹೀಗಾಗಿ ಜಗಳ ತಾರಕಕ್ಕೇರಿತ್ತು. ಕುಟುಂಬಸ್ಥರು ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ದೂರು ನೀಡಲಾಗಿತ್ತು.
ತಾಯಿ, ಮಗ ಹಾಗೂ ಕುಟುಂಬಸ್ಥರು ಖೈರ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಕುಟುಂಬಸ್ಥರು ಹಾಗೂ ತಾಯಿ ಮಗ ಪೊಲೀಸ್ ಠಾಣೆಯಲ್ಲಿ ಆಸ್ತಿ ಹಂಚಿಕೆ ವಿಚಾರದ ಮಾತುಕತೆ ಆರಂಭಿಸಿದ್ದಾರೆ. ಕೆಲ ಹೊತ್ತಿನ ಬಳಿಕ ತಾಯಿ ಹಾಗೂ ಮಗ ಪೊಲೀಸ್ ಠಾಣೆಯಿಂದ ಹೊರಬಂದಿದ್ದಾರೆ. ಬಳಿಕ ಠಾಣೆಯ ಬದಿಯಲ್ಲಿ ನಿಂತು ವಾಗ್ವಾದ ಆರಂಭಿಸಿದ್ದಾರೆ.
ಈ ವೇಳೆ ತಾಯಿ ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚವುದಾಗಿ ಬೆದರಿಸಿದ್ದಾಳೆ. ಪೊಲೀಸರಿಗೆ ಹೇಳುವುದಾಗಿ ಮಗನ ಬೆದರಿಸಲು ನೋಡಿದ್ದಾರೆ. ಆದರೆ ಪಿತ್ತ ನೆತ್ತಿಗೇರಿದ್ದ ಮಗ ಬೆಂಕಿಯ ಕಿಡಿ ಹೊತ್ತಿಸಿದ್ದಾನೆ. ಪರಿಣಾಮ ಒಂದೇ ಸಮನೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಧಗಧನೆ ಹೊತ್ತಿ ಉರಿದಿದೆ. ಪೊಲೀಸರು ಓಡೋಡಿ ಬಂದು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಈ ಪ್ರಯತ್ನಗಳು ಕೆಲ ನಿಮಿಷಗಳ ವರೆಗೆ ನಡೆದಿದೆ.
ಠಾಣೆ ಒಳಗಿದ್ದ ಪೊಲೀಸರು ಟೇಬಲ್ ಮೇಲೆ, ಠಾಣೆಯಲ್ಲಿರುವ ಜೈಲಿನೊಳಗೆ ನೀಡವು ಬೆಡ್ ಶೀಟ್ ಹೊತ್ತು ತಂದು ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಬಹುತೇಕ ದೇಹದ ಭಾಗ ಸುಟ್ಟು ಹೋಗಿದೆ. ಇತ್ತ ಲೈಟರ್ ಮೂಲಕ ಬೆಂಕಿ ಹಚ್ಚಿದ ಮಗ ಬಳಿಕ ವಿಡಿಯೋ ರೆಕಾರ್ಡ್ ಮಾಡಿ ವಿಕೃತಿ ಮೆರೆದಿದ್ದಾನೆ. ತಕ್ಷಣವೇ ಮಹಿಳೆಯನ್ನು ಪೊಲೀಸರು ಆಸ್ಪತ್ರೆ ದಾಖಲಿಸಿದ್ದಾರೆ. ಶೇಕಡಾ 40 ರಷ್ಟು ಮಹಿಳೆ ದೇಹ ಸುಟ್ಟು ಹೋಗಿದೆ. ಥಮಿಕ ತನಿಕೆಯಲ್ಲಿ ಮಗ ಬೆಂಕಿ ಹಚ್ಚುತ್ತಿರುವ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…